ಬಂಧನ
(ಪ್ರಾತಿನಿಧಿಕ ಚಿತ್ರ)
ಮೂಲ್ಕಿ: ಶಾಲೆಗೆ ಬಿಡುವ ನೆಪದಲ್ಲಿ ತಮ್ಮ ಮನೆಯ ಮನೆಗೆಲಸದಾಕೆ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಕಿನ್ನಿಗೋಳಿಯ ಪಿಂಟೋ ಗಾರ್ಡನ್ ಮಾಲೀಕ, ಉದ್ಯಮಿ ರಾಕೀ ಪಿಂಟೋ (68) ಅವರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಮನೆಗೆಲಸಕ್ಕೆ ಬರುವ ತಾಯಿಯೊಂದಿಗೆ ಇರುತ್ತಿದ್ದ ಬಾಲಕಿಯನ್ನು ಶಾಲೆಗೆ ಬಿಡುವ ನೆಪದಲ್ಲಿ ಕಾರಿನಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಮೂಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರಿನ ಸಹಿತ ರಾಕಿ ಪಿಂಟೋ ಅವರನ್ನು ಬಂಧಿಸಲಾಗಿದ್ದು, ಬಂಧನದ ಸಮಯದಲ್ಲಿ ರಕ್ತದೊತ್ತಡ ಹೆಚ್ಚಾಗಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಳೆದ ವಾರ ಇದೇ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ ಅರೋಪದಂತೆ ಕಾನೂನು ಸಂಘರ್ಷಕ್ಕೆ ಒಳಗಾದ ಇಬ್ಬರು ಬಾಲಕರು ಸೇರಿ 5 ಮಂದಿಯನ್ನು ಬಂಧಿಸಲಾಗಿದೆ. ಇದೀಗ ಬಾಲಕಿಯ ತಾಯಿ ತನ್ನ ಮಗಳ ಮೇಲಿನ ಲೈಂಗಿಕ ದೌರ್ಜನ್ಯದ ವಿರುದ್ಧ ದೂರು ನೀಡಿದ್ದು ಮೂಲ್ಕಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.