ADVERTISEMENT

ಮತ್ತೊಮ್ಮೆ ಅಂಗಾರ ಕೈತಪ್ಪಿದ ಅವಕಾಶ

ದಕ್ಷಿಣ ಕನ್ನಡ ಜಿಲ್ಲೆಗೆ ಸಿಗದ ಸಚಿವ ಸ್ಥಾನ: ಅಸಮಾಧಾನ

ಚಿದಂಬರ ಪ್ರಸಾದ್
Published 20 ಆಗಸ್ಟ್ 2019, 20:15 IST
Last Updated 20 ಆಗಸ್ಟ್ 2019, 20:15 IST
ಎಸ್‌.ಅಂಗಾರ
ಎಸ್‌.ಅಂಗಾರ   

ಮಂಗಳೂರು: ಸಚಿವ ಸಂಪುಟದಲ್ಲಿ ಜಿಲ್ಲೆಗೆ ಪ್ರಾತಿನಿಧ್ಯ ಸಿಗದೇ ಇರುವುದು ಬಿಜೆಪಿ ವಲಯದಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಸತತ 6 ನೇ ಬಾರಿಗೆ ಸುಳ್ಯ ಕ್ಷೇತ್ರದಿಂದ ಆಯ್ಕೆಯಾಗಿರುವ ಎಸ್. ಅಂಗಾರ ಅವರಿಗೆ ಸಚಿವ ಸ್ಥಾನ ಸಿಗಲಿದೆ ಎಂದು ನಿರೀಕ್ಷೆ ಹುಸಿಯಾಗಿದ್ದು, ಪಕ್ಷದ ಮುಖಂಡರು ಹಾಗೂ ಶಾಸಕರಲ್ಲಿ ಅಸಮಾಧಾನ ಮೂಡಿಸಿದೆ.

ಸಂಘ ಪರಿವಾರ ಪ್ರಬಲವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ 7ರಲ್ಲಿ ಬಿಜೆಪಿ ಶಾಸಕರಿದ್ದಾರೆ. ಅಂಗಾರ ಅವರನ್ನು ಹೊರತುಪಡಿಸಿ, ಉಳಿದವರು ಮೊದಲ ಬಾರಿಗೆ ಶಾಸಕರಾಗಿದ್ದಾರೆ. ಹೀಗಾಗಿ ಹಿರಿತನವನ್ನು ಪರಿಗಣಿಸಿ ಅಂಗಾರ ಅವರನ್ನು ಸಚಿವರನ್ನಾಗಿ ಮಾಡಲಾಗುತ್ತದೆ ಎಂಬ ಲೆಕ್ಕಾಚಾರ ಮಾಡಲಾಗಿತ್ತು.

ವಿಧಾನಸಭೆ ಚುನಾವಣೆ ನಂತರ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದಿದ್ದರಿಂದ ಜಿಲ್ಲೆಯಲ್ಲಿ ಏಳು ಸ್ಥಾನ ಗೆದ್ದರೂ ಸಚಿವ ಸ್ಥಾನ ಖಾದರ್ ಅವರ ಪಾಲಾಗಿತ್ತು. ಇದೀಗ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದರೂ ಸಚಿವ ಸ್ಥಾನ ನೀಡದೇ ಇರುವುದು ಸರಿಯಲ್ಲ. ಜಿಲ್ಲೆಯ ಹೆಚ್ಚಿನ ಮತದಾರರು ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸಿದ್ದು, ಸಚಿವ ಸ್ಥಾನ ಸಿಗದೇ ಇರುವುದರಿಂದ ಜನರಿಗೆ ಹಾಗೂ ಕಾರ್ಯಕರ್ತರಿಗೆ ನಿರಾಸೆ ಉಂಟಾಗಿದೆ ಎಂದು ಬಿಜೆಪಿ ಮುಖಂಡರು ಹೇಳುತ್ತಿದ್ದಾರೆ.

ADVERTISEMENT

ಸಿ.ಎಂ. ಭೇಟಿ ಇಂದು: ‘ಬುಧವಾರ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಚರ್ಚಿಸೋಣ. ಅಲ್ಲಿಯವರೆಗೆ ಯಾವುದೇ ಆತುರದ ನಿರ್ಧಾರ ಬೇಡ’ ಎಂದು ಕೋಟ ಶ್ರೀನಿವಾಸ ಪೂಜಾರಿ ಸಲಹೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇಂದು ಸಿ.ಎಂ ಭೇಟಿ ಸಾಧ್ಯತೆ

ಅಂಗಾರ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬ ನಿರೀಕ್ಷೆಯಲ್ಲಿ ಬೆಂಗಳೂರಿಗೆ ತೆರಳಿದ್ದ ಸ್ಥಳೀಯ ಬಿಜೆಪಿ ನಾಯಕರಿಗೆ ನಿರಾಸೆ ಉಂಟಾಗಿದ್ದು, ಅಲ್ಲಿಯೇ ಪಕ್ಷದ ಹಿರಿಯರ ಎದುರು ಅಸಮಾಧಾನ ಹೊರಹಾಕಿದ್ದಾರೆ.

ಸಚಿವರಾಗಿ ಕೋಟ ಶ್ರೀನಿವಾಸ ಪೂಜಾರಿ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ, ಸುಳ್ಯ ತಾಲ್ಲೂಕಿನ ಹಲವಾರು ಬಿಜೆಪಿ ಮುಖಂಡರು ‘ತಾವು ತಟಸ್ಥರಾಗಿ ಉಳಿಯುವುದಾಗಿ’ ಎಚ್ಚರಿಕೆ ನೀಡಿದರು.

‘ಬುಧವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚಿಸೋಣ. ಗುರುವಾರ ಜಿಲ್ಲೆಯ ಶಾಸಕರು, ಸಂಸದರು ಚರ್ಚೆ ಮಾಡಲಿದ್ದಾರೆ. ಅಲ್ಲಿಯವರೆಗೆ ಯಾವುದೇ ಆತುರದ ನಿರ್ಧಾರ ಬೇಡ’ ಎಂದು ಕೋಟ ಶ್ರೀನಿವಾಸ ಪೂಜಾರಿ ಸಲಹೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

* ಜಿಲ್ಲೆಯ ಏಳೂ ಶಾಸಕರು, ಸಂಸದರು ಸೇರಿ ಗುರುವಾರ ಚರ್ಚೆ ಮಾಡುತ್ತೇವೆ. ನಂತರ ಪಕ್ಷದ ಪ್ರಮುಖರಿಗೆ ಮನವರಿಕೆ ಮಾಡಲಾಗುವುದು.

-ಸಂಜೀವ ಮಠಂದೂರು, ಶಾಸಕ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ

* ಇವನ್ನೂ ಓದಿ..

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.