ADVERTISEMENT

ಅಧಾರ್‌ ನೋಂದಣಿ, ತಿದ್ದುಪಡಿ ಶಿಬಿರ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2025, 4:12 IST
Last Updated 6 ಆಗಸ್ಟ್ 2025, 4:12 IST
ಬೆಳ್ತಂಗಡಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಧಾರ್‌ ನೋಂದಣಿ ಮತ್ತು ತಿದ್ದುಪಡಿ ಶಿಬಿರಕ್ಕೆ ಚಾಲನೆ ನೀಡಲಾಯಿತು
ಬೆಳ್ತಂಗಡಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಅಧಾರ್‌ ನೋಂದಣಿ ಮತ್ತು ತಿದ್ದುಪಡಿ ಶಿಬಿರಕ್ಕೆ ಚಾಲನೆ ನೀಡಲಾಯಿತು   

ಬೆಳ್ತಂಗಡಿ: ತಾಲ್ಲೂಕು ಪಂಚಾಯಿತಿ ಬೆಳ್ತಂಗಡಿ, ಗ್ಯಾರಂಟಿ ಯೋಜನೆಗಳ ತಾಲ್ಲೂಕು ಅನುಷ್ಠಾನ ಸಮಿತಿ, ಅಂಚೆ ಇಲಾಖೆ ಪುತ್ತೂರು ಇವರ ಸಹಯೋಗದಲ್ಲಿ ಅಧಾರ್‌ ನೋಂದಣಿ, ತಿದ್ದುಪಡಿ ಶಿಬಿರವು ಬೆಳ್ತಂಗಡಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆಯಿತು.

ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಬಿ.ಪದ್ಮನಾಭ ಸಾಲ್ಯಾನ್‌ ಶಿಬಿರವನ್ನು ಉದ್ಘಾಟಿಸಿದರು. ಬೆಸ್ಟ್‌ ಫೌಂಡೇಶನ್‌ ಅಧ್ಯಕ್ಷ ರಕ್ಷಿತ್‌ ಶಿವರಾಂ ಮಾತನಾಡಿ ಶುಭ ಹಾರೈಸಿದರು

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಗ್ಯಾರಂಟಿ ಯೋಜನೆಗಳ ತಾಲ್ಲೂಕು ಮಟ್ಟದ ಸಮಿತಿ ಸದಸ್ಯ ಕಾರ್ಯದರ್ಶಿ ಭವಾನಿಶಂಕರ್‌ ಎನ್, ಗ್ಯಾರಂಟಿ ಯೋಜನೆಗಳ ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಶೇಖರ್‌ ಕುಕ್ಕೇಡಿ, ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಸುರೇಶ್‌ ವಿಟ್ಲ, ಭಾರತೀಯ ಅಂಚೆ ಇಲಾಖೆಯ ಪುತ್ತೂರು ವಿಭಾಗದ ಮಾರ್ಕೆಟಿಂಗ್‌ ಮ್ಯಾನೇಜರ್‌ ಗುರುಪ್ರಸಾದ್‌, ಯುವನಿಧಿ ಯೋಜನೆಯ ಜಿಲ್ಲಾ ತರಬೇತುದಾರರಾದ ಮಂಜೂಷಾ, ಗ್ಯಾರಂಟಿ ಯೋಜನೆಯ ತಾಲ್ಲೂಕು ಅನುಷ್ಠಾನ ಸಮಿತಿ ಸದಸ್ಯರಾದ ನೇಮಿರಾಜ ಕಿಲ್ಲೂರು, ಸೌಮ್ಯ ಲಾಯಿಲ, ಮರಿಟಾ ಪಿಂಟೊ, ಶರೀಫ್‌ ಸಬರಬೈಲು, ಸತೀಶ್‌ ಹೆಗ್ಡೆ ವೇಣೂರು, ವಿಜಯ ಗೌಡ, ವಂದನಾ ಭಂಡಾರಿ, ವೀರಪ್ಪ ಮೊಯಿಲಿ, ಕೇಶವ ನಾಯ್ಕ, ತಾಲ್ಲೂಕು ಪಂಚಾಯಿತಿ ಅಧೀಕ್ಷಕ ಪ್ರಶಾಂತ್‌ ಡಿ.ಬಳಂಜ, ನೋಡಲ್‌ ಅಧಿಕಾರಿ ಹೆರಾಲ್ಡ್‌ ಸಿಕ್ವೇರಾ ಭಾಗವಹಿಸಿದ್ದರು.

ADVERTISEMENT

ಅಂಚೆ ಇಲಾಖೆಯ ಮೇಲಂತಬೆಟ್ಟು ಶಾಖಾ ಅಂಚೆ ಮೇಲ್ವಿಚಾರಕಿ ಚೈತ್ರ, ಕೊಯ್ಯೂರು ಶಾಖಾ ಅಂಚೆ ಮೇಲ್ವಿಚಾರಕಿ ಸಂತೃಪ್ತಿ ಅವರು ಆಧಾರ್ ನೋಂದಣಿ ಮತ್ತು ತಿದ್ದುಪಡಿ ಕಾರ್ಯವನ್ನು ನಡೆಸಿಕೊಟ್ಟರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.