
ಪ್ರಜಾವಾಣಿ ವಾರ್ತೆ
ಮಂಗಳೂರು: ಪ್ರಮುಖ ಅಡಿಕೆ ವಹಿವಾಟು ಸಂಸ್ಥೆಯಾದ ಕ್ಯಾಂಪ್ಕೊ 2025–30ರ ಅವಧಿಗೆ ಅಧ್ಯಕ್ಷರಾಗಿ ಸತೀಶ್ಚಂದ್ರ ಎಸ್.ಆರ್, ಉಪಾಧ್ಯಕ್ಷರಾಗಿ ಪದ್ಮರಾಜ್ ಪಟ್ಟಾಜೆ ಅವಿರೋಧವಾಗಿ ಆಯ್ಕೆಯಾದರು.
ಬಂಟ್ವಾಳ ತಾಲ್ಲೂಕಿನ ಪುಣಚ ಗ್ರಾಮ ಸತೀಶ್ಚಂದ್ರ, 2015–20ರ ಅವಧಿಯಲ್ಲಿ ಕ್ಯಾಂಪ್ಕೊ ಅಧ್ಯಕ್ಷರಾಗಿ ಅನುಭವ ಹೊಂದಿರುವವರು. ಹಿಂದಿನ ಅವಧಿಯಲ್ಲಿ ಸಂಸ್ಥೆಯ ನಿರ್ದೇಶಕರಾಗಿದ್ದರು.
ಕಾಸರಗೋಡಿನ ಪಟ್ಟಾಜೆ ಬದಿಯಡ್ಕದ ಪ್ರಗತಿಪರ ಕೃಷಿಕ ಪದ್ಮರಾಜ್ ಪಟ್ಟಾಜೆ ಸತತ ಎರಡು ಅವಧಿಗೆ ಕ್ಯಾಂಪ್ಕೊ ಸಂಸ್ಥೆಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಈ ಆಯ್ಕೆಯು ಕೇಂದ್ರ ಸರ್ಕಾರದ ಸಹಕಾರ ಸಚಿವಾಲಯದ ಅಡಿಯಲ್ಲಿ ಬರುವ ಸಹಕಾರಿ ಚುನಾವಣಾ ಪ್ರಾಧಿಕಾರದ ಅನುಮೋದನೆ ಪಡೆದ ಮೇಲೆ ಅಧಿಕೃತವಾಗಿ ಘೋಷಣೆಯಾಗುತ್ತದೆ ಎಂದು ಕ್ಯಾಂಪ್ಕೊ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.