ಕಿಶೋರ್ ಕುಮಾರ್ ಕೊಡ್ಗಿ
ಮಂಗಳೂರು: ಹುರಿದ ಅಡಿಕೆಯ ಆಮದಿನಿಂದಾಗಿ ದೇಶೀಯ ಅಡಿಕೆ ಬೆಳೆಗಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ‘ಕ್ಯಾಂಪ್ಕೊ’ ಕಳವಳ ವ್ಯಕ್ತಪಡಿಸಿದೆ.
ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವರಿಗೆ ಪತ್ರ ಬರೆದಿರುವ ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೂಡ್ಗಿ, ಸರ್ಕಾರವು ಇದಕ್ಕೆ ಕಡಿವಾಣ ಹಾಕಲು ತಕ್ಷಣವೇ ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿದ್ದಾರೆ.
ಹುರಿದ ಅಡಿಕೆಯನ್ನು ಮೌಲ್ಯವರ್ಧಿತ ಉತ್ಪನ್ನದ ರೂಪದಲ್ಲಿ ಆಮದು ಮಾಡಿಕೊಳ್ಳಲಾಗುತ್ತಿದೆ. ಆಮದುದಾರರು ಸುಂಕ ತಪ್ಪಿಸಲು ಈ ತಂತ್ರ ಅನುಸರಿಸುತ್ತಿದ್ದಾರೆ. ತಪ್ಪು ವರ್ಗೀಕರಣದ ಮೂಲಕ ಮಾರುಕಟ್ಟೆ ಪ್ರವೇಶಿಸುತ್ತಿದೆ ಎಂದು ಹೇಳಿದ್ದಾರೆ.
ಯಾವುದೇ ರೂಪದ ಅಡಿಕೆಯ ಆಮದಿಗೆ ಕನಿಷ್ಠ ಆಮದು ದರ ನಿಗದಿ ಮಾಡಬೇಕು. ದೇಶೀಯ ಬೆಳೆಗಾರರಿಗೆ ನ್ಯಾಯಸಮ್ಮತ ದರ ದೊರಕುವಂತೆ ನೀತಿ ರೂಪಿಸಬೇಕು ಎಂದು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.