ADVERTISEMENT

ಅಗತ್ಯ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಡಾ.ರಾಜೇಂದ್ರ

ಬ್ಯಾಂಕ್‌ ಸಿಬ್ಬಂದಿಗೆ ಲಸಿಕೆ ಅಭಿಯಾನ

​ಪ್ರಜಾವಾಣಿ ವಾರ್ತೆ
Published 3 ಜೂನ್ 2021, 5:58 IST
Last Updated 3 ಜೂನ್ 2021, 5:58 IST
ಮಂಗಳೂರಿನಲ್ಲಿ ಬುಧವಾರ ಕೆನರಾ ಬ್ಯಾಂಕ್‌ ಸಿಬ್ಬಂದಿಗೆ ಜಿಲ್ಲಾಡಳಿತದ ಆದ್ಯತೆಯಲ್ಲಿ ಕೋವಿಡ್‌ ಲಸಿಕೆ ಹಾಕುವ ಪ್ರಕ್ರಿಯೆಗೆ ಚಾಲನೆ ನೀಡಿತು.
ಮಂಗಳೂರಿನಲ್ಲಿ ಬುಧವಾರ ಕೆನರಾ ಬ್ಯಾಂಕ್‌ ಸಿಬ್ಬಂದಿಗೆ ಜಿಲ್ಲಾಡಳಿತದ ಆದ್ಯತೆಯಲ್ಲಿ ಕೋವಿಡ್‌ ಲಸಿಕೆ ಹಾಕುವ ಪ್ರಕ್ರಿಯೆಗೆ ಚಾಲನೆ ನೀಡಿತು.   

ಮಂಗಳೂರು: ಬ್ಯಾಂಕ್ ಸಿಬ್ಬಂದಿ ಸಾರ್ವಜನಿಕರೊಂದಿಗೆ ನೇರ ಸಂಪರ್ಕ ಇರುವುದರಿಂದ ಹೆಚ್ಚು ಸುರಕ್ಷಾಕ್ರಮ ಕೈಗೊಳ್ಳಬೇಕು. ಹೆಚ್ಚು ಜಾಗೃತರಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಹೇಳಿದರು.

ಜಿಲ್ಲಾಡಳಿತವು ಕೆನರಾ ಬ್ಯಾಂಕ್‌ನ ಮಂಗಳೂರು ವಲಯ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ಬ್ಯಾಂಕ್‌ ಸಿಬ್ಬಂದಿಗೆ ಲಸಿಕೆ ನೀಡುವ ಅಭಿಯಾನದಲ್ಲಿ ಅವರು ಮಾತನಾಡಿದರು. ಶಾಸಕ ವೇದವ್ಯಾಸ ಕಾಮತ್ ಚಾಲನೆ ನೀಡಿದರು. ಕೋವಿಡ್ ತೀವ್ರ ಸಂದರ್ಭದಲ್ಲೂ ಗ್ರಾಹಕರಿಗೆ ಯಾವುದೇ ತೊಂದರೆಯಾಗದಂತೆ ಬ್ಯಾಂಕ್‌ ಉದ್ಯೋಗಿಗಳು ಸೇವೆ ನೀಡಿದ್ದಾರೆ ಎಂದು ತಿಳಿಸಿದರು.

ಬ್ಯಾಂಕ್‌ನ ಸಿಬ್ಬಂದಿಯನ್ನು ಆದ್ಯತಾ ಕ್ಷೇತ್ರ ಎಂದು ಪರಿಗಣಿಸಿ ಲಸಿಕೆ ಹಾಕಿರುವುದಕ್ಕೆ ಬ್ಯಾಂಕ್‌ನ ಮಹಾಪ್ರಬಂಧಕ ಯೋಗೀಶ್ ಆಚಾರ್ಯ ಜಿಲ್ಲಾಡಳಿತ ಹಾಗೂ ಶಾಸಕ ವೇದವ್ಯಾಸ ಕಾಮತ್ ಅವರನ್ನು ಅಭಿನಂದಿಸಿದರು. ಯಾವುದೇ ಸಂದಿಗ್ಧ ಸ್ಥಿತಿ ಇದ್ದರೂ ಬ್ಯಾಂಕ್ ತನ್ನ ಸೇವೆಯನ್ನು ಮಾಡಲಿದೆ ಎಂದರು.‌ ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿಗಳ ಭಾಗವಾಗಿ ಮಾಸ್ಕ್, ಡಿಜಿಟಲ್ ಥರ್ಮೋ ಮೀಟರ್, ಆಕ್ಸಿಮೀಟರ್ ಅನ್ನು ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿದರು. ಬ್ಯಾಂಕ್‌ನ ಉಪಮಹಾಪ್ರಬಂಧಕ ರಾಘವ ನಾಯ್ಕ್, ಸುಚಿತ್ರಾ ಎಸ್., ಲೀಡ್ ಬ್ಯಾಂಕ್ ಪ್ರಬಂಧಕ ಪ್ರವೀಣ್ ಎಂ.ಪಿ. ಉಪಸ್ಥಿತರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.