ಮಂಗಳೂರು: ವಾಮಂಜೂರು ಬಳಿಯ ಕೆತ್ತಿಕ್ಕಲ್‌ನಲ್ಲಿ ಭೂಕುಸಿತ ಸಂಭವಿಸಿದ ಪ್ರದೇಶಕ್ಕೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಭಾನುವಾರ ಭೇಟಿ ನೀಡಿ ಪರಿಶೀಲಿಸಿದರು. ಮನೆ ಕಳೆದುಕೊಳ್ಳುವ ಆತಂಕ ಎದುರಿಸುತ್ತಿರುವ ನಿವಾಸಿಗಳ ಅಹವಾಲು ಆಲಿಸಿದರು.
ಸಂಭವಿಸಬಹುದಾದ ಅನಾಹುತವನ್ನು ತಪ್ಪಿಸುವ ನಿಟ್ಟಿನಲ್ಲಿ ಶೀಘ್ರದಲ್ಲೇ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ಸಭೆ ಕರೆದು ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸಂಸದರು ನಿರ್ದೇಶನ ನೀಡಿದರು.
ಕೆತ್ತಿಕಲ್ ಗುಡ್ಡದ ಮೇಲೆ ಪಾಲಿಕೆಯು ವೆಟ್‌ವೆಲ್ ನಿರ್ಮಿಸುತ್ತಿರುವ ಸ್ಥಳಕ್ಕೂ ಭೇಟಿ ನೀಡಿ ವಸ್ತುಸ್ಥಿತಿಯ ಪರಿಶೀಲಿಸಿದರು.
ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಹೆಚ್ಚುವರಿ ಜಿಲ್ಲಾಧಿಕಾರಿ ಸಂತೋಷ್ ಕುಮಾರ್, ತಹಶೀಲ್ದಾರ್ ಪ್ರಶಾಂತ್, ಪಾಲಿಕೆಯ ಎಂಜಿನಿಯರ್‌ಗಳು, ಸ್ಥಳೀಯ ಪಾಲಿಕೆಯ ಸದಸ್ಯರು, ಬಿಜೆಪಿ ಮಂಗಳೂರು ನಗರ ಉತ್ತರ ಮಂಡಲ ಅಧ್ಯಕ್ಷರಾದ ರಾಜೇಶ್ ಕೊಟ್ಟಾರಿ, ಬಿಜೆಪಿ ಮುಖಂಡರಾದ ಜಗದೀಶ್ ಶೇಣವ ಮತ್ತು ಸ್ಥಳೀಯರು ಜೊತೆಯಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.