ADVERTISEMENT

ಬಜಪೆ | ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: 7 ಕಂಬ ಧರೆಗೆ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2024, 13:58 IST
Last Updated 12 ಸೆಪ್ಟೆಂಬರ್ 2024, 13:58 IST
ನಜ್ಜುಗುಜ್ಜಾದ ಕಾರು
ನಜ್ಜುಗುಜ್ಜಾದ ಕಾರು   

ಬಜಪೆ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಸುಮಾರು 7 ವಿದ್ಯುತ್ ಕಂಬಗಳು ನೆಲಕ್ಕುರುಳಿದ ಘಟನೆ ಕಟೀಲು- ಬಜಪೆ ರಾಜ್ಯಹೆದ್ದಾರಿಯ ಎಕ್ಕಾರು ಬಳಿ ಬುಧವಾರ ತಡ ರಾತ್ರಿ ನಡೆದಿದೆ.

ವಿದ್ಯುತ್ ಕಂಬಕ್ಕೆ ಡಿಕ್ಕಿಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರಿಗೆ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಗೊತ್ತಾಗಿದೆ.

ನಜ್ಜುಗುಜ್ಜಾದ ಕಾರು

ಕಂಬಗಳು ಉರುಳಿದ್ದರಿಂದ ಪರಿಸರದಲ್ಲಿ ರಾತ್ರಿಯಿಂದ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಘಟನೆಯಿಂದಾಗಿ ಮೆಸ್ಕಾಂಗೆ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ. ವಿದ್ಯುತ್ ಕಂಬ, ತಂತಿಗಳ ಜೋಡಣಾ ಕಾರ್ಯ ಗುರುವಾರ ನಡೆಯಿತು.

ADVERTISEMENT
ತುಂಡಾಗಿ ಬಿದ್ದಿದ್ದ ವಿದ್ಯುತ್‌ ಕಂಬ
ನಜ್ಜುಗುಜ್ಜಾದ ಕಾರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.