ADVERTISEMENT

ಜಪ್ಪಿನಮೊಗರು: ವಿದ್ಯಾರ್ಥಿ ಕಾಂಗ್ರೆಸ್ ಮುಖಂಡ‌ ಸೇರಿ ಇಬ್ಬರು ಸಾವು

ಹೆದ್ದಾರಿ ವಿಭಜಕಕ್ಕೆ ಕಾರು ಡಿಕ್ಕಿ

​ಪ್ರಜಾವಾಣಿ ವಾರ್ತೆ
Published 18 ಜೂನ್ 2025, 13:01 IST
Last Updated 18 ಜೂನ್ 2025, 13:01 IST
ಓಂಶ್ರೀ
ಓಂಶ್ರೀ   

ಮಂಗಳೂರು: ನಗರ ಹೊರವಲಯದ‌ ಜಪ್ಪಿನಮೊಗರುವಿನ ಬಳಿ ಬುಧವಾರ ಮುಂಜಾನೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ವಿದ್ಯಾರ್ಥಿ ಕಾಂಗ್ರೆಸ್ ಮುಖಂಡ ಸಹಿತ ಇಬ್ಬರು ಯುವಕರು ಮೃತಪಟ್ಟಿದ್ದಾರೆ.

ಎನ್ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಉಪಾಧ್ಯಕ್ಷ ಓಂಶ್ರೀ ಪೂಜಾರಿ  (24) ಹಾಗೂ ಕದ್ರಿಯ ಅಮನ್ ರಾವ್ (22) ಮೃತರು. ಕಾರಿನಲ್ಲಿದ್ದ ವಂಶಿ, ಆಶಿಷ್ ಹಾಗೂ ಇಟಲಿಯ ಪ್ರವಾಸಿಗ ಜೆರ‍್ರಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತೊಕ್ಕೊಟ್ಟು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಫೋಕ್ಸ್ ವ್ಯಾಗನ್ ಕಾರು ಜಪ್ಪಿನಮೊಗರು ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡು ಹೆದ್ದಾರಿ ವಿಭಜಕಕ್ಕೆ ಡಿಕ್ಕಿ ಹೊಡೆದಿತ್ತು. ಓಂಶ್ರೀ ಪೂಜಾರಿ ತನ್ನ ನಾಲ್ವರು ಗೆಳೆಯರೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು‌.  ಗಂಭೀರವಾಗಿ ಗಾಯಗೊಂಡಿದ್ದ ಓಂಶ್ರೀ ಪೂಜಾರಿ ಹಾಗೂ ಅಮನ್‌ ರಾವ್ ಆಸ್ಪತ್ರೆಗೆ ಕರೆಯೊಯ್ಯುವಷ್ಟರಲ್ಲಿ ಅಸುನೀಗಿದ್ದಾರೆ. ಅಂಶಿ ಹಾಗೂ ಆಶಿಷ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಜೆರ‍್ರಿ ಅವರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ADVERTISEMENT

ಅಪಘಾತದ ತೀವ್ರತೆಗೆ ಕಾರಿನ ಎಂಜಿನ್ ಭಾಗ ಕಿತ್ತುಹೋಗಿದೆ. ಏರ್‌ಬ್ಯಾಗ್‌ಗಳು ಚೂರಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಯುವಕರು ಕಂಕನಾಡಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ, ನಂತರ ತಲಪಾಡಿಗೆ ತೆರಳಿ, ಅಲ್ಲಿಂದ ನಗರಕ್ಕೆ ಮರಳುತ್ತಿದ್ದರು ಎಂದು ಗೊತ್ತಾಗಿದೆ. 

ಅಮನ್ ರಾವ್‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.