ಉಡುಪಿ: ಮತೀಯ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಮಾಜಿ ಪೊಲೀಸ್ ಅಧಿಕಾರಿ ಅನುಪಮಾ ಶೆಣೈ ಅವರ ವಿರುದ್ಧ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅನುಪಮಾ ಶೆಣೈ ಸಾಮಾಜಿಕ ಜಾಲತಾಣದಲ್ಲಿ ಮತೀಯ ಭಾವನೆಗಳಿಗೆ ನೋವುಂಟು ಮಾಡುವ ಪೋಸ್ಟ್ ಹಾಕಿದ್ದಾರೆ ಎಂದು ಪಡುಬಿದ್ರಿಯ ಆಸೀಫ್ ಹನೀಫ್ ಎಂಬುವರ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈಚೆಗೆ ಅನುಪಮಾ ಶೆಣೈ ಮಾಲೇಗಾವ್ ಸ್ಫೋಟವನ್ನು ಸಮರ್ಥಿಸುವ ರೀತಿಯಲ್ಲಿ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.