ADVERTISEMENT

ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನ: ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿರುದ್ಧ ಪ್ರಕರಣ

​ಪ್ರಜಾವಾಣಿ ವಾರ್ತೆ
Published 14 ಮೇ 2025, 14:12 IST
Last Updated 14 ಮೇ 2025, 14:12 IST
ಭಾರತಿ ಶೆಟ್ಟಿ,
ಭಾರತಿ ಶೆಟ್ಟಿ,   

ಬೆಳ್ತಂಗಡಿ: ಗುರುವಾಯನಕೆರೆಯಲ್ಲಿ ಮೇ 12ರಂದು ನಡೆದ ಸುಹಾಸ್ ಶೆಟ್ಟಿ ನುಡಿನಮನ ಕಾರ್ಯಕ್ರಮದಲ್ಲಿ ಕುವೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾರತಿ ಶೆಟ್ಟಿ ಅವರು ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಹರಿಪ್ರಸಾದ್ ಇರುವರ್ತಾಯ ಎಂಬುವರು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. 

ಸಾಯಿರಾಮ್ ಫ್ರೆಂಡ್ಸ್ ಸಂಘಟನೆ ವತಿಯಿಂದ ಗುರುವಾಯನಕೆರೆಯಲ್ಲಿ ನಡೆದ ಸುಹಾಸ್ ಶೆಟ್ಟಿಗೆ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಭಾರತಿ ಶೆಟ್ಟಿ, ’ಗುರುವಾಯನಕರೆಯಲ್ಲಿ ಮುಸ್ಲಿಮರ ಸಂಖ್ಯೆ ಜಾಸ್ತಿ , ಮುಸ್ಲಿಮರ ಬಳಿ ವ್ಯಾಪಾರ, ವ್ಯವಹಾರ ಮಾಡುವುದನ್ನು ನಿಲ್ಲಿಸಬೇಕು. ಮುಸ್ಲಿಂ ರಿಕ್ಷಾ ಚಾಲಕರು ನಮ್ಮಲ್ಲಿ ಚಂದವಾಗಿ ಮಾತನಾಡಿ ನಮಗೆ ಗೊತ್ತಿಲ್ಲದೆ ಮೋಸ ಮಾಡುತ್ತಾರೆ ಎಂದು ತುಳು ಭಾಷೆಯಲ್ಲಿ ಹೇಳಿದ್ದರು. ಇದಕ್ಕೆ ಸಂಬಂಧಿಸಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಮಾಜದಲ್ಲಿ ಶಾಂತಿ ಕದಡುವ ಉದ್ದೇಶದಿಂದ, ಕೋಮು ಸಂಘರ್ಷ ಸೃಷ್ಟಿಸುವ ಉದ್ದೇಶದಿಂದ ಈ ರೀತಿ ಮಾತನಾಡಿದ್ದಾರೆ. ಇವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ’  ಹರಿಪ್ರಸಾದ್‌ ದೂರಿನಲ್ಲಿ ಒತ್ತಾಯಿಸಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಹರಿಪ್ರಸಾದ್ ಇರುವರ್ತಾಯ ದೂರು ನೀಡುತ್ತಿರುವುದು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT