
ಪ್ರಜಾವಾಣಿ ವಾರ್ತೆಮಂಗಳೂರು: ‘ಶಿವಮೊಗ್ಗದಲ್ಲಿ ಹತ್ಯೆಗೀಡಾದ ಬಜರಂಗದಳದ ಕಾರ್ಯಕರ್ತ ಹರ್ಷ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿ ದ್ದರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ.
ಮಂಗಳೂರಿನ ಸೈಬರ್ ಪೊಲೀಸ್ ಠಾಣೆಯಲ್ಲಿ, ‘ಮಂಗಳೂರು ಮುಸ್ಲಿಂ’ ಹೆಸರಿನ ಫೇಸ್‌ಬುಕ್ ಪೇಜ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಫೇಸ್‌ಬುಕ್‌ನಲ್ಲಿ ಇರುವರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.