ADVERTISEMENT

ಯುಟ್ಯೂಬ್‌ನಲ್ಲಿ ಸುಳ್ಳು ಸುದ್ದಿ ಪ್ರಸಾರ ಆರೋಪ: ಜಯಂತ್ ವಿರುದ್ಧ ಪ್ರಕರಣ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2025, 0:20 IST
Last Updated 16 ಅಕ್ಟೋಬರ್ 2025, 0:20 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

– ಐಸ್ಟಾಕ್ ಚಿತ್ರ

ಮಂಗಳೂರು: ಸೌಜನ್ಯಾ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಮಾಡುವಲ್ಲಿ ಷಡ್ಯಂತ್ರ ನಡೆದಿದೆ ಎಂದು ಯುಟ್ಯೂಬ್‌ನಲ್ಲಿ ಸುಳ್ಳು ಸುದ್ದಿ ಪ್ರಸಾರ ಮಾಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಜಯಂತ್ ಟಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

‘ಬಂಟ್ವಾಳ ಡಿವೈಎಸ್ಪಿ ಕಾನೂನಾತ್ಮಕವಾಗಿ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಮಾಡಲು ಪುತ್ತೂರು ಉಪವಿಭಾಗಾಧಿಕಾರಿಗೆ ಪ್ರಸ್ತಾವ ಸಲ್ಲಿಸಿದ್ದರು. ಸತ್ಯಾಸತ್ಯತೆ ತಿಳಿದಿದ್ದರೂ ಅಪೂರ್ಣವಾದ ಮಾಹಿತಿಯೊಂದಿಗೆ ಸೌಜನ್ಯಾ ಪರ ಹೋರಾಟಕ್ಕೆ ಪೊಲೀಸರು ತೊಂದರೆ ಮಾಡುತ್ತಿದ್ದಾರೆ ಎಂಬಂತೆ ಬಿಂಬಿಸಿ, ಇದೊಂದು ಷಡ್ಯಂತ್ರ ಎಂದು ಜಯಂತ್ ಯುಟ್ಯೂಬ್‌ನಲ್ಲಿ ಸುಳ್ಳು ಸುದ್ದಿ ಹರಿಬಿಟ್ಟಿದ್ದರು' ಎಂದು ಪೊಲೀಸರು ತಿಳಿಸಿದ್ದಾರೆ‌.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.