ADVERTISEMENT

ಬಂಟ್ವಾಳ | ಕೋಮು ಸೌಹಾರ್ದಕ್ಕೆ ಧಕ್ಕೆ: ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 1 ಜೂನ್ 2025, 13:30 IST
Last Updated 1 ಜೂನ್ 2025, 13:30 IST
   

ವಿಟ್ಲ: ಬಂಟ್ವಾಳ ತಾಲ್ಲೂಕಿನ ಪೆರುವಾಯಿ ಗ್ರಾಮದ ನಿವಾಸಿ ಯತೀಶ್‌ ಎಂಬಾತ ‘ಯತೀಶ್ ಪೆರುವಾಯಿ’ ಹೆಸರಿನ ಫೇಸ್‌ಬುಕ್‌ ಖಾತೆಯಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆಉಂಟುಮಾಡುವ 3 ಪೋಸ್ಟ್‌ ಹಾಕಿದ್ದು, ಆತನ ವಿರುದ್ಧ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಂಥ ಪೋಸ್ಟ್‌ಗಳಿಂದ ವಿಭಿನ್ನ ಸಮುದಾಯಗಳ ನಡುವೆ ವೈಮನಸ್ಸು ಉಂಟಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಕಂಡುಬಂದಿದೆ. ಈ ಸಂಬಂಧ ಆರೋಪಿ ವಿರುದ್ಧ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT