ADVERTISEMENT

ಉಪ್ಪಿನಂಗಡಿ | ಹಟ್ಟಿಯಿಂದ ದನ ಕಳವು ಪ್ರಕರಣ: ಮೂವರ ಬಂಧನ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2025, 4:05 IST
Last Updated 6 ಸೆಪ್ಟೆಂಬರ್ 2025, 4:05 IST
ಇರ್ಷಾದ್‌
ಇರ್ಷಾದ್‌   

ಉಪ್ಪಿನಂಗಡಿ: ಹಟ್ಟಿಯಿಂದ ದನ ಕಳವು ಮಾಡಿ ದನದ ಮಾಲೀಕನ ತೋಟದಲ್ಲೇ ವಧಿಸಿ ಕರುಳು ಸಹಿತ ಹೊಟ್ಟೆಯೊಳಗಿನ ತ್ಯಾಜ್ಯವನ್ನು ಅಲ್ಲೇ ಎದೆದು ದನದ ಮಾಂಸದೊಂದಿಗೆ ಪರಾರಿಯಾಗಿದ್ದ ಆರೋಪಿಗಳನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳು ಉಳ್ಳಾಲ ಚೆಂಬುಗುಡ್ಡೆ ನಿವಾಸಿ ಇರ್ಷಾದ್‌ (34), ಮಂಗಳೂರು ಕುದ್ರೋಳಿ ನಿವಾಸಿ ಮಹಮ್ಮದ್ ಮನ್ಸೂರ್ (48), ಮಂಗಳೂರು ಕಣ್ಣೂರು ನಿವಾಸಿ ಅಬ್ದುಲ್ ಅಝೀಮ್ (18) ಎಂದು ಗುರುತಿಸಲಾಗಿದೆ.

ಸೆ.4ರಂದು ನಸುಕಿನಲ್ಲಿ ಪೆರ್ನೆಯ ಕಡಂಬು ನಿವಾಸಿ ದೇಜಪ್ಪ ಮೂಲ್ಯ ಅವರ ಹಟ್ಟಿಯಿಂದ ಸುಮಾರು ಎರಡು ವರ್ಷ ಪ್ರಾಯದ ಗಬ್ಬದ ದನವನ್ನು ಕದ್ದು, ಮಾಂಸ ಮಾಡಿ ತ್ಯಾಜ್ಯವನ್ನು ಅಲ್ಲೇ ಎಸೆದಿದ್ದರು.

ತುಂಬೆ ಘಟನೆಯ ಆರೋಪಿಗಳು: ಆ.15ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತುಂಬೆ ಬಳಿ ಜಾನುವಾರು ಕಳವು ಹಾಗೂ ಅದರ ಅಂಗಾಂಗಳು ಅಲ್ಲೇ ಸಮೀಪ ಪತ್ತೆಯಾಗಿತ್ತು. ಈ ಘಟನೆಗೆ ಸಂಬಂಧಿಸಿ ಬಂಟ್ವಾಳ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಕರ್ನಾಟಕ ಜಾನುವಾರು ಹತ್ಯಾ ಪ್ರತಿಬಂಧಕ ಸಂರಕ್ಷಣಾ ಕಾಯ್ದೆ-2020 ಹಾಗೂ ಕಲಂ 11(ಡಿ) ಪ್ರಾಣಿ ಹಿಂಸೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿತ್ತು. ಈ ಕೃತ್ಯದಲ್ಲೂ ಇದೇ ಆರೋಪಿಗಳು ಭಾಗಿಯಾಗಿದ್ದು, ಪೊಲೀಸರು ಹೆಚ್ಚಿನ ವಿಚಾರಣೆ ನಡೆಸಿದಾಗ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ನೆಯ ಕಡಂಬು ಬಳಿ ನಡೆಸಿದ ಕೃತ್ಯದ ಬಗ್ಗೆ ಬಾಯ್ಬಿಟ್ಟಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮನ್ಸೂರ್
ಅಝೀಮ್‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.