ಮಂಗಳೂರು: ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್‌ಇ), ಇನ್‌ಸ್ಟಿಟ್ಯೂಟ್ ಆಫ್ ಸೆಕ್ರೆಟರಿಯೇಟ್ ಟ್ರೇನಿಂಗ್ ಮ್ಯಾನೇಜ್‌ಮೆಂಟ್ ದೆಹಲಿ ಮತ್ತು ಶಕ್ತಿ ವಿದ್ಯಾ ಸಂಸ್ಥೆ ಸಹಯೋಗದಲ್ಲಿ ಸಂಪನ್ಮೂಲ ವ್ಯಕ್ತಿಗಳ ತರಬೇತಿ ಕಾರ್ಯಾಗಾರ ನಡೆಯಿತು.
ಇಲ್ಲಿಯ ಶಕ್ತಿನಗರದಲ್ಲಿರುವ ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ನಡೆದ ಕಾರ್ಯಾಗಾರದಲ್ಲಿ ವಿವಿಧ ಜಿಲ್ಲೆಗಳಿಂದ 55ಕ್ಕೂ ಹೆಚ್ಚು ಶಿಕ್ಷಕರು, ಪ್ರಾಂಶುಪಾಲರು ಭಾಗವಹಿಸಿದ್ದರು.
ಕಾರ್ಯಾಗಾರ ಉದ್ಘಾಟಿಸಿದ ಇನ್‌ಸ್ಟಿಟ್ಯೂಟ್ ಆಫ್ ಸೆಕ್ರೆಟರಿಯೇಟ್ ಟ್ರೇನಿಂಗ್ ಮ್ಯಾನೇಜ್‌ಮೆಂಟ್‌ನ ಉಪ ನಿರ್ದೇಶಕ ಪುನೀತ್ ಕುಮಾರ್ ಶರ್ಮ, ಶಿಕ್ಷಕರು, ಮಾರ್ಗದರ್ಶಕರು ಭವಿಷ್ಯದಲ್ಲಿ ಮಕ್ಕಳನ್ನು ಉತ್ತಮ ನಾಗರಿಕರನ್ನಾಗಿ ರೂಪಿಸಿ, ಸದೃಢ ದೇಶವನ್ನು ಕಟ್ಟಲು ನೆರವಾಗಬೇಕು. ಮಕ್ಕಳಿಲ್ಲಿರುವ ಭಯ ಮತ್ತು ಕೀಳರಿಮೆಯನ್ನು ಹೋಗಲಾಡಿಸಬೇಕು ಎಂದರು.
ಸಿಬಿಎಸ್‌ಇ ಜಿಲ್ಲಾ ತರಬೇತಿ ಸಂಘಟಕ ಸುರೇಶ್, ಶಕ್ತಿ ಸಂಸ್ಥೆಯ ಸಂಸ್ಥಾಪಕ ಕೆ.ಸಿ ನಾಯಕ್, ಸಂಸ್ಥೆಯ ಪ್ರಧಾನ ಸಲಹೆಗಾರ ರಮೇಶ್ ಕೆ, ಶಕ್ತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವೆಂಕಟೇಶ ಮೂರ್ತಿ ಎಚ್. ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.