ADVERTISEMENT

ತ್ವರಿತ ಕ್ರಮಕ್ಕೆ ಸಿಇಒ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2022, 3:43 IST
Last Updated 9 ಏಪ್ರಿಲ್ 2022, 3:43 IST
ಡಾ. ಕುಮಾರ್
ಡಾ. ಕುಮಾರ್   

ಮಂಗಳೂರು: ‘ಪ್ರಜಾವಾಣಿ’ ಫೋನ್‌ ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಬಂದ ಅಹವಾಲುಗಳನ್ನು ಗಂಭೀರವಾಗಿ ಪರಿಗಣಿಸಿರುವ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅವರು, ಈ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ಪತ್ರ ಬರೆದು, ತಕ್ಷಣ ಕ್ರಮವಹಿಸಿ, ವರದಿ ನೀಡುವಂತೆ ನಿರ್ದೇಶನ ನೀಡಿದ್ದಾರೆ.

ಗುರುವಾರ ಪತ್ರಿಕಾ ಕಚೇರಿಯಲ್ಲಿ ನಡೆದ ಫೋನ್‌ ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೇಳಿಕೊಂಡ 23ಕ್ಕೂ ಹೆಚ್ಚು ದೂರಗಳನ್ನು ಡಾ. ಕುಮಾರ್, ಪಂಚಾಯತ್‌ರಾಜ್ ಎಂಜಿನಿಯರಿಂಗ್ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು, ಕಡಬ ತಹಶೀಲ್ದಾರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT