ADVERTISEMENT

ಕೋವಿಡ್: ಕೇರಳ ಗಡಿಯಲ್ಲಿ ಚೆಕ್ ಪೋಸ್ಟ್ ಆರಂಭ, ಕಟ್ಟುನಿಟ್ಟಿನ ತಪಾಸಣೆ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2021, 5:24 IST
Last Updated 22 ಫೆಬ್ರುವರಿ 2021, 5:24 IST
ಮಂಗಳೂರು:ಕೇರಳ ಗಡಿಯಲ್ಲಿ ಚೆಕ್ ಪೋಸ್ಟ್ ಆರಂಭ
ಮಂಗಳೂರು:ಕೇರಳ ಗಡಿಯಲ್ಲಿ ಚೆಕ್ ಪೋಸ್ಟ್ ಆರಂಭ   

ಮಂಗಳೂರು: ಕೇರಳದಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗುತ್ತಿದ್ದು, ಕೇರಳದಿಂದ ಬರುವವರ ಆರೋಗ್ಯ ತಪಾಸಣೆಗಾಗಿ ಚೆಕ್ ಪೋಸ್ಟ್ ಆರಂಭಿಸಲಾಗಿದೆ.

ಐದು ರಸ್ತೆಗಳನ್ನು ಹೊರತುಪಡಿಸಿ, ಉಳಿದೆಲ್ಲ ರಸ್ತೆಗಳನ್ನು ಬಂದ್ ಮಾಡಲಾಗಿದೆ. ಐದು ಚೆಕ್ ಪೋಸ್ಟ್ ಗಳ ಮೂಲಕ‌‌ ಕೇರಳದಿಂದ ಕರ್ನಾಟಕಕ್ಕೆ ಬರುವವರಿಗೆ ಕೋವಿಡ್ ನೆಗೆಟಿವ್ ಪ್ರಮಾಣಪತ್ರ‌ ಕಡ್ಡಾಯವಾಗಿದೆ.
ತಹಸೀಲ್ದಾರ್, ಡಿಎಚ್ ಒ, ಪೊಲೀಸರಿಂದ ಕೇರಳದಿಂದ ಬರುವವರ ವಿಚಾರಣೆ ಮಾಡಲಾಗುತ್ತಿದೆ.

ದಕ್ಷಿಣ ಕನ್ನಡದ ಜಿಲ್ಲಾಡಳಿತದ‌ ಕ್ರಮವನ್ನು ವಿರೋಧಿಸಿ ಗಡಿನಾಡು ಕನ್ನಡಿಗರು ತಲಪಾಡಿ ಗೇಟ್ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.