ADVERTISEMENT

ಉಜಿರೆ: ಚೆಕ್‌ಪೋಸ್ಟ್‌ನಲ್ಲಿ ಕಟ್ಟುನಿಟ್ಟಿನ ಕ್ರಮ- ಪೊಲೀಸ್ ಇಲಾಖೆಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 20 ಜೂನ್ 2021, 5:40 IST
Last Updated 20 ಜೂನ್ 2021, 5:40 IST
ಶನಿವಾರ ಧರ್ಮಸ್ಥಳ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಯಿತು.
ಶನಿವಾರ ಧರ್ಮಸ್ಥಳ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಯಿತು.   

ಉಜಿರೆ: ಹೊರಜಿಲ್ಲೆಗಳಿಂದ ಬರುವ ಯಾತ್ರಾರ್ಥಿಗಳು ಹಾಗೂ ಜನರನ್ನು ತಡೆಯುವುದಕ್ಕಾಗಿ ಚಾರ್ಮಾಡಿ, ಕೊಕ್ಕಡ ಮತ್ತು ಬೆಳ್ತಂಗಡಿ ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಬೆಳ್ತಂಗಡಿ ತಹಶೀಲ್ದಾರ್ ಮಹೇಶ್ ಜೆ. ಅವರು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ.

ಶನಿವಾರ ಧರ್ಮಸ್ಥಳ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ ಮತ್ತು ಧರ್ಮಸ್ಥಳ ಗ್ರಾಮ ಕಾರ್ಯಪಡೆಯ ಸಂಯುಕ್ತ ಆಶ್ರಯದಲ್ಲಿ ಕಾನೂನು ಕ್ರಮದ ಬಗ್ಗೆ ಸಮಾಲೋಚನಾ ಸಭೆ ನಡೆಯಿತು. ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಗ್ರಾಮ ಪಂಚಾಯಿತಿ ಮತ್ತು ಆರೋಗ್ಯ ಇಲಾಖೆ ಜಂಟಿಯಾಗಿ ಕಾರ್ಯನಿರ್ವಹಿಸಲು ನಿರ್ಧರಿಸಲಾಯಿತು.

ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀನಿವಾಸ್ ರಾವ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತಾಲ್ಲೂಕು ಆರೋಗ್ಯ ವೈದ್ಯಾಧಿಕಾರಿ ಡಾ. ಕಲಾಮಧು ಮತ್ತು ಧರ್ಮಸ್ಥಳ ಪೊಲೀಸ್ ಠಾಣಾ ಉಪನಿರೀಕ್ಷಕ ಚಂದ್ರಶೇಖರ್, ಗ್ರಾಮಕರಣಿಕ ಪ್ರದೀಪ್ ಮತ್ತು ಗ್ರಾಮ ಪಂಚಾಯಿತಿ ಸದಸ್ಯರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.