ADVERTISEMENT

ಪೊಳಲಿ: ಜಿಲ್ಲಾ ಮಟ್ಟದ ಚೆಸ್ ಟೂರ್ನಿ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 31 ಜುಲೈ 2022, 5:57 IST
Last Updated 31 ಜುಲೈ 2022, 5:57 IST
ಬಂಟ್ವಾಳ ತಾಲ್ಲೂಕಿನ ಪೊಳಲಿ ಸರ್ಕಾರಿ ಪ್ರೌಢಶಾಲೆ ವತಿಯಿಂದ ರಾಮಕೃಷ್ಣ ತಪೋವನದಲ್ಲಿ ಶನಿವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಚೆಸ್ ಟೂರ್ನಿಗೆ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಚಾಲನೆ ನೀಡಿದರು.
ಬಂಟ್ವಾಳ ತಾಲ್ಲೂಕಿನ ಪೊಳಲಿ ಸರ್ಕಾರಿ ಪ್ರೌಢಶಾಲೆ ವತಿಯಿಂದ ರಾಮಕೃಷ್ಣ ತಪೋವನದಲ್ಲಿ ಶನಿವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಚೆಸ್ ಟೂರ್ನಿಗೆ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಚಾಲನೆ ನೀಡಿದರು.   

ಬಂಟ್ವಾಳ: ವಿದ್ಯಾರ್ಥಿಗಳಿಗೆ ಚೆಸ್ ಮತ್ತಿತರ ಕ್ರೀಡೆಯಿಂದ ಬುದ್ಧಿಮತ್ತೆ ವೃದ್ಧಿ ಜೊತೆಗೆ ಶಾರೀರಿಕ ಆರೋಗ್ಯ ಮತ್ತು ಶೈಕ್ಷಣಿಕ ಉತ್ಸಾಹವೂ ಸಿಗುತ್ತದೆ ಎಂದು ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಹೇಳಿದರು.

ಇಲ್ಲಿನ ಪೊಳಲಿ ಸರ್ಕಾರಿ ಪ್ರೌಢಶಾಲೆ ವತಿಯಿಂದ ರಾಮಕೃಷ್ಣ ತಪೋವನದಲ್ಲಿ ಶನಿವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಚೆಸ್ ಟೂರ್ನಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಕರಿಯಂಗಳ ಗ್ರಾಮ ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ್ ಪಲ್ಲಿಪಾಡಿ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಪಿ, ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಭುವನೇಶ್, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ವಿಷ್ಣುನಾರಾಯಣ ಹೆಬ್ಬಾರ್, ಶಿಕ್ಷಣ ಸಂಯೋಜಕಿ ಸುಜಾತಾ, ಪ್ರಮುಖರಾದ ರವಿಶಂಕರ್, ಜತ್ತಪ್ಪ ಗೌಡ, ರಂಜಿತಾ, ಪ್ರತಿಮಾ, ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ವೆಂಕಟೇಶ ನಾವುಡ ಇದ್ದರು. ಮುಖ್ಯಶಿಕ್ಷಕ ರಾಧಾಕೃಷ್ಣ ಭಟ್ ಸ್ವಾಗತಿಸಿದರು. ಶಿಕ್ಷಕಿ ಉಮಾ ವಂದಿಸಿದರು. ಜಾನೆಟ್ ಲೋಬೊ ಕಾರ್ಯಕ್ರಮ ನಿರೂಪಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.