ADVERTISEMENT

ಮದುವೆ ಮಂಟಪದಲ್ಲೂ ‘ಪೌರತ್ವ ಕಾಯ್ದೆ’ ಜಾಗೃತಿ!

​ಪ್ರಜಾವಾಣಿ ವಾರ್ತೆ
Published 17 ಜನವರಿ 2020, 14:50 IST
Last Updated 17 ಜನವರಿ 2020, 14:50 IST
ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್‌ ಗೀತಾಂಜಲಿ ಸಭಾಂಗಣದಲ್ಲಿ ಶುಕ್ರವಾರ ನಡೆದ ವಿವಾಹ ಕಾರ್ಯಕ್ರಮದಲ್ಲಿ ಯುವಕರು ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ಭಿತ್ತಿಚಿತ್ರ ಪ್ರದರ್ಶಿಸಿದರು.
ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್‌ ಗೀತಾಂಜಲಿ ಸಭಾಂಗಣದಲ್ಲಿ ಶುಕ್ರವಾರ ನಡೆದ ವಿವಾಹ ಕಾರ್ಯಕ್ರಮದಲ್ಲಿ ಯುವಕರು ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ಭಿತ್ತಿಚಿತ್ರ ಪ್ರದರ್ಶಿಸಿದರು.   

ಬಂಟ್ವಾಳ: ಇಲ್ಲಿನ ಬಿ.ಸಿ.ರೋಡು ರಾಷ್ಟ್ರೀಯ ಹೆದ್ದಾರಿ ಸಮೀಪದ ಗೀತಾಂಜಲಿ ಸಭಾಂಗಣದಲ್ಲಿ ಶುಕ್ರವಾರ ನಡೆದ ವಿವಾಹ ಕಾರ್ಯಕ್ರಮದಲ್ಲಿ ಬಡಗಬೆಳ್ಳೂರು ಸಮೀಪದ ಕಮ್ಮಾಜೆ ಯುವಕರು ‘ಪೌರತ್ವ ತಿದ್ದುಪಡಿ ಕಾಯ್ದೆ’ ಬೆಂಬಲಿಸಿ ಭಿತ್ತಿಚಿತ್ರ ಪ್ರದರ್ಶಿಸಿ ಗಮನ ಸೆಳೆದಿದ್ದಾರೆ.

ತಾಲ್ಲೂಕಿನ ತೆಂಗಬೆಳ್ಳೂರು ಗ್ರಾಮದ ಹೆಬ್ಬರಬೈಲು ನಿವಾಸಿ ರೋಹಿತ್ ಮತ್ತು ಕಡೇಶಿವಾಲಯ ನಿವಾಸಿ ಶೋಭಾ ಅವರ ವಿವಾಹ ಕಾರ್ಯಕ್ರಮ ಶುಕ್ರವಾರ ನಡೆದಿದ್ದು, ಇಲ್ಲಿಗೆ ಬಂದಿದ್ದ ಅಪಾರ ಮಂದಿ ಸಂಬಂಧಿಕರು ಮತ್ತು ಸ್ನೇಹಿತರು ನೂತನ ವಧು-ವರರಿಗೆ ಶುಭ ಹಾರೈಸಿದರು.

ಇದೇ ವೇಳೆ ನಾಗಶ್ರೀ ಮಿತ್ರ ವೃಂದ ಸಂಘಟನೆ ಯುವಕರು ವಿವಾಹ ಮಂಟಪಕ್ಕೆ ಬಂದು ‘ಪೌರತ್ವ ತಿದ್ದುಪಡಿ ಕಾಯ್ದೆ’ ಬೆಂಬಲಿಸಿ ಭಿತ್ತಿಚಿತ್ರ ಪ್ರದರ್ಶಿಸಿ ಗಮನ ಸೆಳೆದಿದ್ದಾರೆ.

ADVERTISEMENT

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.