ADVERTISEMENT

ಪೌರ ಕಾರ್ಮಿಕರು ಕೋವಿಡ್ ಚಾಂಪಿಯನ್‌ಗಳು: ಜಿಲ್ಲಾಧಿಕಾರಿ ಡಾ. ರಾಜೇಂದ್ರ

ಆರೋಗ್ಯ ತಪಾಸಣಾ ಶಿಬಿರ

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2022, 15:59 IST
Last Updated 30 ಮಾರ್ಚ್ 2022, 15:59 IST
ಮಂಗಳೂರಿನ  ಪುರಭವನದಲ್ಲಿ ಆಯೋಜಿಸಿದ್ದ ಮಂಗಳೂರು ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಹಾನಗರ ಪಾಲಿಕೆ ಮೇಯರ್‌ ಪ್ರೇಮಾನನಂದ ಶೆಟ್ಟಿ ಮಾತನಾಡಿದರು. ಜಿಲ್ಲಾದಿಕಾರಿ ಡಾ. ರಾಜೇಂದ್ರ, ಪಾಲಿಕೆ ಅಯುಕ್ತ ಅಕ್ಷಯ್‌ ಶ್ರೀಧರ್‌ ಇದ್ದರು.
ಮಂಗಳೂರಿನ  ಪುರಭವನದಲ್ಲಿ ಆಯೋಜಿಸಿದ್ದ ಮಂಗಳೂರು ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಹಾನಗರ ಪಾಲಿಕೆ ಮೇಯರ್‌ ಪ್ರೇಮಾನನಂದ ಶೆಟ್ಟಿ ಮಾತನಾಡಿದರು. ಜಿಲ್ಲಾದಿಕಾರಿ ಡಾ. ರಾಜೇಂದ್ರ, ಪಾಲಿಕೆ ಅಯುಕ್ತ ಅಕ್ಷಯ್‌ ಶ್ರೀಧರ್‌ ಇದ್ದರು.   

ಮಂಗಳೂರು: ‘ಕೋವಿಡ್ ಸಂದರ್ಭದಲ್ಲಿ ಮಂಗಳೂರು ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದ ಪೌರ ಕಾರ್ಮಿಕರು ಕೋವಿಡ್ ಸಂದರ್ಭದ ಚಾಂಪಿಯನ್‌ಗಳಾಗಿದ್ದಾರೆ’ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಪ್ರಶಂಸಿಸಿದರು.

ಮಂಗಳೂರು ಮಹಾನಗರ ಪಾಲಿಕೆ ಮತ್ತು ದೇರಳಕಟ್ಟೆಯ ಯೆನೆಪೊಯ ಸಮುದಾಯ ಅರೋಗ್ಯ ವಿಭಾಗದ
ಆಶ್ರಯದಲ್ಲಿ ಬುಧವಾರ ನಗರದ ಪುರಭವನದಲ್ಲಿ ಆಯೋಜಿಸಿದ್ದ ಮಂಗಳೂರು ಮಹಾನಗರ ಪಾಲಿಕೆ ಪೌರ ಕಾರ್ಮಿಕರಿಗೆ ಆರೋಗ್ಯ ತಪಾಸಣಾ ಶಿಬಿರದಲ್ಲಿ ಅವರು ಮಾತನಾಡಿದರು.

ನಗರದ ಸ್ವಚ್ಛತೆಯಲ್ಲಿ ತೊಡಗಿಕೊಂಡಿರುವ ಪೌರ ಕಾರ್ಮಿಕರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಆರೋಗ್ಯ ತಪಾಸಣಾ ಕಾರ್ಯ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದರು. ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಮೇಯರ್ ಪ್ರೇಮಾನಂದ ಶೆಟ್ಟಿ, ಮಾಜಿ ಮೇಯರ್ ದಿವಾಕರ್, ಪಾಲಿಕೆ ಆರೋಗ್ಯ ಅಧಿಕಾರಿ ಡಾ.ಮಂಜಯ್ಯ ಶೆಟ್ಟಿ, ಆರೋಗ್ಯ ನಿರೀಕ್ಷಕ ಶಿವಲಿಂಗಂ, ಕೋವಿಡ್ ವಿಭಾಗದ ನೋಡಲ್ ಅಧಿಕಾರಿ ಡಾ.ಅಣ್ಣಯ್ಯ ಕುಲಾಲ್, ಯೆನೆಪೋಯ ಉಪ ಪ್ರಾಂಶುಪಾಲ ಡಾ.ಅಭಯ ನೀರ್ಗುಡೆ, ಸಮುದಾಯ ಆರೋಗ್ಯ ವಿಭಾಗದ ಮುಖ್ಯಸ್ಥೆ ಡಾ.ಪೂನಂ, ಡಾ.ಶುಭಾಂಕರ್, ಸಾರ್ವಜನಿಕ ಸಂಪರ್ಕ ಪ್ರತಿನಿಧಿ ಭಾಸ್ಕರ ಅರಸ್ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.