ADVERTISEMENT

ಉಳ್ಳಾಲ: ಸೋಮೇಶ್ವರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2023, 12:21 IST
Last Updated 13 ಏಪ್ರಿಲ್ 2023, 12:21 IST
ಸೋಮೇಶ್ವರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಭೇಟಿ ನೀಡಿದರು. ಸತೀಶ್‌ ಕುಂಪಲ, ಸಂತೋಷ್ ರೈ ಬೋಳಿಯಾರ್, ರವೀಂದ್ರ ಶೆಟ್ಟಿ ಉಳಿದೊಟ್ಟು ಮತ್ತು ಇತರರು ಇದ್ದರು
ಸೋಮೇಶ್ವರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಭೇಟಿ ನೀಡಿದರು. ಸತೀಶ್‌ ಕುಂಪಲ, ಸಂತೋಷ್ ರೈ ಬೋಳಿಯಾರ್, ರವೀಂದ್ರ ಶೆಟ್ಟಿ ಉಳಿದೊಟ್ಟು ಮತ್ತು ಇತರರು ಇದ್ದರು   

ಉಳ್ಳಾಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅರಬ್ಬೀ ಸಮುದ್ರದ ಕಿನಾರೆಯಲ್ಲಿರುವ ಸೋಮೇಶ್ವರದ ಸೋಮನಾಥೇಶ್ವರ ದೇವಸ್ಥಾನಕ್ಕೆ ಗುರುವಾರ ಭೇಟಿ ನೀಡಿ ದೇವರ ದರ್ಶನ ಪಡೆದರು.

ಮಂಗಳೂರು (ಉಳ್ಳಾಲ) ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲ, ಪಕ್ಷದ ಜಿಲ್ಲಾ ಉಪಾಧ್ಯಕ್ಷ ಸಂತೋಷ್ ರೈ ಬೋಳಿಯಾರ್, ರವೀಂದ್ರ ಶೆಟ್ಟಿ ಉಳಿದೊಟ್ಟು, ದೇವಸ್ಥಾನದ ಆಡಳಿತ ಮೊಕ್ತೇಸರ ರವೀಂದ್ರನಾಥ ರೈ, ಧನಲಕ್ಷ್ಮೀ ಗಟ್ಟಿ ಸೇರಿದಂತೆ ಹಲವು ಮುಖಂಡರು ಜೊತೆಯಲ್ಲಿದ್ದರು.

ಕಾನ್‌ಸ್ಟೆಬಲ್‌ಗೆ ಗಾಯ: ಬೊಮ್ಮಾಯಿ ಅವರು ಸೋಮೇಶ್ವರ ದೇವಸ್ಥಾನಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬಂದೋಬಸ್ತ್‌ಗಾಗಿ ನಿಯೋಜನೆಗೊಂಡಿದ್ದ ಕಂಕನಾಡಿ ಸಂಚಾರ ಠಾಣೆ ಪೊಲೀಸ್ ಕಾನ್‌ಸ್ಟೆಬಲ್‌ ಮಂಜುನಾಥ ಹೆಗಡೆ ಅವರಿಗೆ ಆಡಂಕುದ್ರು ಬಳಿ ಟೆಂಪೊ ಡಿಕ್ಕಿ ಹೊಡೆದಿದ್ದು, ಅವರು ಗಂಭೀರವಾಗಿ ಗಾಯಗೊಂಡಿದ್ದದಾರೆ.

ಮುಖ್ಯಮಂತ್ರಿ ಭೇಟಿಗೂ ಮುನ್ನ ಅವರು ಸಂಚಾರ ನಿಯಂತ್ರಣ ಕಾರ್ಯದಲ್ಲಿ ತೊಡಗಿದ್ದರು. ಈ ವೇಳೆ ತಲಪಾಡಿ ಕಡೆಗೆ ತೆರಳುತ್ತಿದ್ದ ಟೆಂಪೊ ಚಾಲಕನ ನಿಯಂತ್ರಣ ಕಳೆದು ಅವರಿಗೆ ಡಿಕ್ಕಿ ಹೊಡೆಯಿತು. ಅವರ ತಲೆ ಹಾಗು ಕೈಗಳಿಗೆ ಗಾಯಗಳಾಗಿವೆ. ಅವರನ್ನು ಪಂಪ್‌ವೆಲ್‌ನ ಇಂಡಿಯಾನ ಆಸ್ಪತ್ರೆಗೆ ದಾಖಲಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.