ADVERTISEMENT

ಮಂಗಳೂರು: ಬಿಜೆಪಿ ರಾಜ್ಯ ಕಾರ್ಯಕಾರಣಿ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2020, 7:04 IST
Last Updated 5 ನವೆಂಬರ್ 2020, 7:04 IST
ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸಿದರು.
ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸಿದರು.   

ಮಂಗಳೂರು: ಬಿಜೆಪಿಯ ರಾಜ್ಯ ವಿಶೇಷ ಸಭೆ (ಕಾರ್ಯಕಾರಣಿ)ಯನ್ನು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಿದರು.

ನಗರದ ಟಿ.ವಿ.ರಮಣ ಪೈ ಸಭಾಂಗಣದಲ್ಲಿ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಡಿ.ವಿ. ಸದಾನಂದಗೌಡ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವರಾದ ಕೆ.ಎಸ್.ಈಶ್ವರಪ್ಪ, ಜಗದೀಶ ಶೆಟ್ಟರ್‌, ಆರ್. ಅಶೋಕ, ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಘಟಕದ ಉಪಾಧ್ಯಕ್ಷ ಅರವಿಂದ ಲಿಂಬಾವಳಿ ಭಾಗವಹಿಸಿದ್ದಾರೆ.

ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆ ವಹಿಸಿದ್ದಾರೆ. ವಿವಿಧ ಮೋರ್ಚಾಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಪ್ರಭಾರಿಗಳು ಭಾಗವಹಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.