ADVERTISEMENT

ಆರೋಪ, ಸಾಕ್ಷ್ಯಾಧಾರ ಕಾರಣ ವಿನಯ ಕುಲಕರ್ಣಿ ಬಂಧನ: ಯಡಿಯೂರಪ್ಪ

ಯೋಗೀಶಗೌಡ ಹತ್ಯೆ ಪ್ರಕರಣ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2020, 5:32 IST
Last Updated 5 ನವೆಂಬರ್ 2020, 5:32 IST
 ಮುಖ್ಯಮಂತ್ರಿ ಬಿ‌ಎಸ್.ಯಡಿಯೂರಪ್ಪ
ಮುಖ್ಯಮಂತ್ರಿ ಬಿ‌ಎಸ್.ಯಡಿಯೂರಪ್ಪ   

ಮಂಗಳೂರು: ಮಾಜಿ ಸಚಿವ ವಿನಯ್ ಕುಲಕರ್ಣಿ ಮೇಲೆ ಆರೋಪ ಇದೆ. ಸಾಕ್ಷ್ಯಾಧಾರಗಳು ಸಿಕ್ಕಿದ ಕಾರಣ ಸಿಬಿಐ ಅವರನ್ನು ವಶಕ್ಕೆ ಪಡೆದಿರಬಹುದು ಎಂದು ಮುಖ್ಯಮಂತ್ರಿ ಬಿ‌ಎಸ್.ಯಡಿಯೂರಪ್ಪ ಮಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದರು.

ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ಅವರು ಪ್ರತಿಕ್ರಿಯಿಸಿದರು.

ವಿನಯ್ ಕುಲಕರ್ಣಿ ಬಿಜೆಪಿಗೆ ಸೇರುತ್ತಾರೆ ಎಂಬುದ್ದು ಶುದ್ದ ಸುಳ್ಳು ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ADVERTISEMENT

ನಿಧನರಾದ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂಬುದು ಎಲ್ಲರ ಅಪೇಕ್ಷೆ. ಈಗಲಾದರೂ ನ್ಯಾಯ ಸಿಗಲಿ ಎಂಬುದೇ ನಮ್ಮ ಅಭಿಪ್ರಾಯ ಎಂದರು.

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಆರಂಭ: ನಗರದಲ್ಲಿಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಆರಂಭವಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಡಿ.ವಿ. ಸದಾನಂದಗೌಡ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವರಾದ ಕೆ.ಎಸ್.ಈಶ್ವರಪ್ಪ, ಜಗದೀಶ ಶೆಟ್ಟರ್‌, ಆರ್. ಅಶೋಕ, ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಘಟಕದ ಉಪಾಧ್ಯಕ್ಷ ಅರವಿಂದ ಲಿಂಬಾವಳಿ ಭಾಗವಹಿಸಿದ್ದಾರೆ.

ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆ ವಹಿಸಿದ್ದಾರೆ. ವಿವಿಧ ಮೋರ್ಚಾಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಪ್ರಭಾರಿಗಳು ಭಾಗವಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.