ADVERTISEMENT

ಹೊರರಾಜ್ಯಗಳಿಗೆ ವಿದ್ಯುತ್ ಮಾರಾಟ ಮಾಡುವಷ್ಟು ಶಕ್ತಿ ನಮ್ಮಲ್ಲಿದೆ: ಸುನಿಲ್ ಕುಮಾರ್

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2022, 11:23 IST
Last Updated 22 ಏಪ್ರಿಲ್ 2022, 11:23 IST
ವಿ. ಸುನಿಲ್‌ಕುಮಾರ್
ವಿ. ಸುನಿಲ್‌ಕುಮಾರ್   

ಮಂಗಳೂರು: ‘ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ ಇಲ್ಲ. ಬೇಸಿಗೆ ಪೂರ್ವ ತಯಾರಿಯನ್ನು ನಾಲ್ಕು ತಿಂಗಳುಗಳ ಹಿಂದೆಯೇ ಮಾಡಿಕೊಂಡಿದ್ದು, ಬೇಡಿಕೆಗಿಂತ ಉತ್ಪಾದನೆ ಹೆಚ್ಚಾದರೆ, ಹೊರರಾಜ್ಯಗಳಿಗೆ ವಿದ್ಯುತ್ ಮಾರಾಟ ಮಾಡುವಷ್ಟು ಶಕ್ತಿ ನಮ್ಮಲ್ಲಿದೆ’ ಎಂದು ಇಂಧನ ಸಚಿವ ವಿ.ಸುನಿಲ್ ಕುಮಾರ್ ಸ್ಪಷ್ಟಪಡಿಸಿದರು.

ಶುಕ್ರವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಕಲ್ಲಿದ್ದಲಿನ ಕೊರತೆ ಕಾರಣಕ್ಕೆ ವಿದ್ಯುತ್ ಉತ್ಪಾದನೆ ಕಡಿತಗೊಳಿಸಿಲ್ಲ. ಉಳಿದ ರಾಜ್ಯಕ್ಕೆ ಹೋಲಿಸಿದರೆ ಕರ್ನಾಟಕದಲ್ಲಿ ವಿದ್ಯುತ್ ನಿರ್ವಹಣೆಯನ್ನು ಯಶಸ್ವಿಯಾಗಿ ಮಾಡಲಾಗುತ್ತಿದೆ. ಪ್ರತಿನಿತ್ಯ ರಾಜ್ಯಕ್ಕೆ 13ರಿಂದ 15 ರೇಕ್ ಕಲ್ಲಿದ್ದಲು ಸರಬರಾಜಾಗುತ್ತಿದೆ. ಬೇಡಿಕೆಗೆ ತಕ್ಕಂತೆ ಉತ್ಪಾದನೆ ಆಗುತ್ತಿದೆ’ ಎಂದರು.

ವಿರೋಧ ಪಕ್ಷಗಳ ಊಹಾಪೋಹ ಸತ್ಯಕ್ಕೆ ದೂರವಾದ ಸಂಗತಿ. ರಾಜ್ಯದಲ್ಲಿ 14,800 ಮೆಗಾ ವ್ಯಾಟ್ ವಿದ್ಯುತ್ ಬೇಡಿಕೆ ಇದ್ದಾಗಲೇ ನಾವು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿದ್ದೇವೆ. ಕೇಂದ್ರ ಸರ್ಕಾರದ ಜತೆ ನಿರಂತರ ಸಂಪರ್ಕದಲ್ಲಿದ್ದು, ಕಲ್ಲಿದ್ದಲು ಕೊರತೆ ಎಲ್ಲ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.