ADVERTISEMENT

ಉತ್ತಮ ವಿದ್ಯಾಭ್ಯಾಸಕ್ಕೆ ವ್ಯವಸ್ಥೆ: ಮುಂಡೋಡಿ

ಸುಬ್ರಹ್ಮಣ್ಯ ಪದವಿಪೂರ್ವ ಕಾಲೇಜಿನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 4 ಜನವರಿ 2019, 13:57 IST
Last Updated 4 ಜನವರಿ 2019, 13:57 IST
ಅಭಿವೃದ್ಧಿ ಕಾರ್ಯಗಳ ಅಮೃತ ಶಿಲೆಯನ್ನು ಕುಕ್ಕೆ ಸುಬ್ರಹ್ಮಣ್ಯ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಅನಾವರಣಗೊಳಿಸಿದರು.
ಅಭಿವೃದ್ಧಿ ಕಾರ್ಯಗಳ ಅಮೃತ ಶಿಲೆಯನ್ನು ಕುಕ್ಕೆ ಸುಬ್ರಹ್ಮಣ್ಯ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಅನಾವರಣಗೊಳಿಸಿದರು.   

ಸುಬ್ರಹ್ಮಣ್ಯ: ‘ಕುಕ್ಕೆ ದೇವಳದ ಅಧೀನ ಎರಡು ಶಿಕ್ಷಣ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು, ಗ್ರಾಮೀಣ ವಿದ್ಯಾರ್ಥಿಗಳು ಯಾವುದೇ ತೊಂದರೆ ಇಲ್ಲದೆ ವ್ಯಾಸಂಗ ಮಾಡಲು ಅವಕಾಶ ಲಭಿಸಿದೆ. ಇನ್ನಷ್ಟು ಪ್ರಗತಿಪರ ಕಾರ್ಯಗಳನ್ನು ಆಡಳಿತ ಮಂಡಳಿ ಹಮ್ಮಿಕೊಳ್ಳಲಿದೆ’ ಎಂದು ಕಾಲೇಜಿನ ಸಂಚಾಲಕ ನಿತ್ಯಾನಂದ ಮುಂಡೋಡಿ ಹೇಳಿದರು.

ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಧೀನತೆಯಲ್ಲಿರುವ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಸುಮಾರು ₹70ಲಕ್ಷ ವೆಚ್ಚದ ಅಭಿವೃದ್ಧಿ ಕಾರ್ಯಗಳನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.

‘ವಿದ್ಯಾರ್ಥಿಗಳಿಗೆ ಬೇಕಾದ ಸುಸಜ್ಜಿತ ವ್ಯವಸ್ಥೆ ಮಾಡಲು ಆಡಳಿತ ಮಂಡಳಿ ಬದ್ಧವಾಗಿದೆ. ಶ್ರೀ ದೇವಳದಿಂದ ನೀಡಿದ ಸೌಲಭ್ಯಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳು ಹೆಚ್ಚಿನ ಅಂಕ ಪಡೆದು ಭವಿಷ್ಯವನ್ನು ಉಜ್ವಲಗೊಳಿಸಬೇಕು’ ಎಂದರು.

ADVERTISEMENT

ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ಕೃಷ್ಣಮೂರ್ತಿ ಭಟ್, ಬಾಲಕೃಷ್ಣ ಬಳ್ಳೇರಿ, ಮಾಧವ.ಡಿ, ರಾಜೀವಿ ಆರ್.ರೈ, ಮಾಸ್ಟರ್ ಪ್ಲಾನ್ ಮೇಲುಸ್ತುವಾರಿ ಸಮಿತಿ ಸದಸ್ಯ ಶಿವರಾಮ ರೈ, ಕೆ.ಎಸ್.ಎಸ್ ಕಾಲೇಜಿನ ಪ್ರಾಂಶುಪಾಲ ಪ್ರೊ.ಕೆ.ಆರ್.ಶೆಟ್ಟಿಗಾರ್, ಶ್ರೀ ದೇವಳದ ಅಭಿಯಂತರ ಉದಯಕುಮಾರ್, ಗುತ್ತಿಗೆದಾರ ಪ್ರಕಾಶ್ ಶೆಟ್ಟಿ ಕುಂದಾಪುರ ಮುಖ್ಯ ಅತಿಥಿಗಳಾಗಿದ್ದರು.

ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ಎನ್.ಎಸ್, ಪ್ರೌಢಶಾಲಾ ವಿಭಾಗದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ನೀಲಪ್ಪ, ಸದಸ್ಯ ಚಂದ್ರಶೇಖರ ವೇದಿಕೆಯಲ್ಲಿದ್ದರು. ಲೋಕೋಪಯೋಗಿ ಅಭಿಯಂತರ ಶ್ರೀನಿವಾಸ್, ಶ್ರೀ ದೇವಳದ ಬೆಳ್ಯಪ್ಪ, ನಾಗರಾಜ್, ಪ್ರಮುಖರಾದ ಸತೀಶ್ ಕೂಜುಗೋಡು , ಉಪನ್ಯಾಸಕರು, ಅಧ್ಯಾಪಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾಂಕ್ರಿಟೀಕರಣಗೊಂಡ ಕಾಲೇಜು ರಸ್ತೆಯನ್ನು ವಿದ್ಯಾರ್ಥಿ ನಾಯಕ ವಿಶ್ವಾಸ್ ರಾವ್ ಉದ್ಘಾಟಿಸಿದರು. ರಾಜ್ಯ ಮಟ್ಟದ ಕಬಡ್ಡಿ ಆಟಗಾರ್ತಿ ಜಯಶ್ರೀ.ಕೆ ಅವರನ್ನು ಸನ್ಮಾನಿಸಲಾಯಿತು.

ಉಪಪ್ರಾಂಶುಪಾಲೆ ರೇಖಾರಾಣಿ ಸೋಮಶೇಖರ್ ಸ್ವಾಗತಿಸಿದರು. ಪ್ರಾಂಶುಪಾಲೆ ಸಾವಿತ್ರಿ.ಕೆ ಪ್ರಸ್ತಾಪಿಪಿಸಿದರು. ಪ್ರೌಢಶಾಲಾ ಮುಖ್ಯಗುರು ಕೆ.ಯಶವಂತ ರೈ ವಂದಿಸಿದರು. ಉಪನ್ಯಾಸಕ ಪ್ರವೀಣ್ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.