ADVERTISEMENT

ಮಂಗಳೂರಿನಲ್ಲಿ ಕಾಲೇಜುಗಳ ಆರಂಭ; ಮೊದಲ ದಿನ ಕಾಣದ ಉತ್ಸಾಹ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2020, 6:57 IST
Last Updated 17 ನವೆಂಬರ್ 2020, 6:57 IST
ಕಾಲೇಜು ವಿದ್ಯಾರ್ಥಿನಿಯರು ತರಗತಿಗೆ ಹಾಜರಾಗಿರುವ ದೃಶ್ಯ
ಕಾಲೇಜು ವಿದ್ಯಾರ್ಥಿನಿಯರು ತರಗತಿಗೆ ಹಾಜರಾಗಿರುವ ದೃಶ್ಯ   
""

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯ ಸೇರಿದಂತೆ ಜಿಲ್ಲೆಯ ಪರಿಗಣಿತ ವಿಶ್ವವಿದ್ಯಾಲಯಗಳು ಹಾಗೂ ಪದವಿ ಕಾಲೇಜುಗಳ ತರಗತಿಗಳು ಮಂಗಳವಾರ ಆರಂಭಗೊಂಡಿದ್ದರೂ, ಕೋವಿಡ್ ಪೂರ್ವದ ಉತ್ಸಾಹ ಕಂಡುಬರಲಿಲ್ಲ.

ಬಹುತೇಕ ವಿಶ್ವವಿದ್ಯಾಲಯ, ಕಾಲೇಜುಗಳ ವಿವಿಧ ವಿಭಾಗಗಳಲ್ಲಿ ಶೇ30 ರಷ್ಟೇ ವಿದ್ಯಾರ್ಥಿಗಳು ಕಂಡು ಬಂದರು.

ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳಿಗೆ ಕೋವಿಡ್ ನೆಗೆಟಿವ್ ಪ್ರಮಾಣ ಪತ್ರ ಪಡೆಯುವುದು ತೊಡಕಾಗಿದೆ. ಇನ್ನೂ ಕೆಲವು ವಿದ್ಯಾರ್ಥಿಗಳ ಪೋಷಕರು ಕೆಲದಿನಗಳು ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದ್ದಾರೆ. ಬೆರಳೆಣಿಕೆಯಷ್ಟು ವಿದ್ಯಾರ್ಥಿಗಳು ಆನ್‌ಲೈನ್‌ಗೆ ಒಗ್ಗಿಕೊಂಡಿದ್ದಾರೆ. ಅವರೆಲ್ಲ ಬಂದಿಲ್ಲ ಎಂದು ಹೆಚ್ಚಿನ ಪ್ರಾಧ್ಯಾಪಕರು ಅಭಿಪ್ರಾಯ ವ್ಯಕ್ತಪಡಿಸಿದರು.

ADVERTISEMENT

ಡಿಸೆಂಬರ್ 1ರಿಂದ ಸಹಜ ಸ್ಥಿತಿಗೆ ಬರಬಹುದು ಎಂದು ನಿರೀಕ್ಷೆ ವ್ಯಕ್ತಪಡಿಸಿದರು.

ಕಾಲೇಜುಗಳಲ್ಲಿ ಮಾಸ್ಕ್ ಕಡ್ಡಾಯ, ಸ್ಯಾನಿಟೈಸರ್ ಬಳಕೆ, ಅಂತರ ಕಾಪಾಡಲು ಸೂಚನೆಗಳು ನೀಡುತ್ತಿರುವುದು ಸಾಮಾನ್ಯವಾಗಿ ಕಂಡುಬಂತು. ಆದರೆ, ಮೊದಲ ದಿನ ಗಂಭೀರವಾಗಿ ತರಗತಿಗಳು ನಡೆಯುತ್ತಿರುವುದು ಕಂಡುಬರಲಿಲ್ಲ.

ಕೋವಿಡ್‌ ಸುರಕ್ಷಾ ಕ್ರಮಗಳ ಬಗ್ಗೆ ಕಾಲೇಜು ಸಿಬ್ಬಂದಿ ಸಮಾಲೋಚನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.