ಮಂಗಳೂರು: ಕಂಕನಾಡಿಯ ಹೈರ್ ಗ್ಲೋ ಎಲೆಗಂಟ್ ಓವರ್‌ಸೀಸ್ ಇಂಟರ್‌ನ್ಯಾಷನಲ್ (ಒಪಿಸಿ) ಪ್ರೈವೇಟ್ ಲಿಮಿಟೆಡ್ ಸಂಸ್ಥೆಯುವ ವಿದೇಶದಲ್ಲಿ ಉದ್ಯೋಗ ಕೊಡಿಸುವ ಆಮಿಷವೊಡ್ಡಿ ವಿವಿಧ ಉದ್ಯೋಗಾಕಾಂಕ್ಷಿಗಳಿಗೆ ₹ 1.82 ಕೋಟಿ ವಂಚನೆ ಮಾಡಿರುವ ಬಗ್ಗೆ ಕದ್ರಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
‘ವಿದೇಶದಲ್ಲಿ ಉದ್ಯೋಗ ಕೊಡಿಸುವ ಭರವಸೆ ನೀಡಿ ಸಂಸ್ಥೆಯು ನನ್ನಿಂದ ₹ 1.65 ಲಕ್ಷ ಪಡೆದುಕೊಂಡಿತ್ತು. ಆದರೆ ನೀಡಿದ್ದ ಭರವಸೆಯಂತೆ ಉದ್ಯೋಗ ಕೊಡಿಸಿಲ್ಲ. ನನ್ನಂತೆಯೇ ಅನೇಕ ಉದ್ಯೋಗಾಂಕ್ಷಿಗಳಿಂದ ಹಣ ಪಡೆದುಕೊಂಡಿರುವ ಸಂಸ್ಥೆ ಅವರಿಗೂ ಇದೇ ರೀತಿ ವಂಚನೆ ಮಾಡಿದೆ. ಅಂದಾಜು ₹ 1.82 ಕೋಟಿ ಮೊತ್ತವನ್ನು ಸಂಸ್ಥೆ ಉದ್ಯೋಗಾಕಾಂಕ್ಷಿಗಳಿಂದ ಪಡೆದುಕೊಂಡಿದ್ದು, ಉದ್ಯೋಗವನ್ನೂ ಕೊಡಿಸದೇ, ಪಡೆದ ಹಣವನ್ನೂ ಮರಳಿಸದೇ ವಂಚಿಸಿದೆ’ ಎಂದು ಸಂತ್ರಸ್ತ ವ್ಯಕ್ತಿಯೊಬ್ಬರು ದೂರಿನಲ್ಲಿ ಆರೋಪಿಸಿದ್ದಾರೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ನಂಬಿಕೆ ದ್ರೋಹವೆಸಗಿರುವ ಸಂಸ್ಥೆಯ ಆಡಳಿತಾಧಿಕಾರಿ ಮತ್ತು ಉದ್ಯೋಗಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.