ADVERTISEMENT

ಮೂಡುಬಿದಿರೆ: ಆಳ್ವಾಸ್ ಪದವಿ ಕಾಲೇಜಿನ ಪ್ರಾರಂಭೋತ್ಸವ

​ಪ್ರಜಾವಾಣಿ ವಾರ್ತೆ
Published 17 ಜೂನ್ 2025, 13:04 IST
Last Updated 17 ಜೂನ್ 2025, 13:04 IST
ಚಿತ್ರ:17ಎಂಡಿಬಿ1 ಮೂಡುಬಿದಿರೆಯ ಕೃಷಿಸಿರಿ ವೇದಿಕೆಯಲ್ಲಿ ಆಳ್ವಾಸ್ ಕಾಲೇಜಿನ ಪ್ರಸಕ್ತ ವರ್ಷದ  ಪದವಿ ತರಗತಿಗಳನ್ನು ಸಂಸ್ಥೆಯ ಟ್ರಸ್ಟಿ ವಿವೇಕ ಆಳ್ವ ಮಂಗಳವಾರ ಉದ್ಘಾಟಿಸಿದರು.
ಚಿತ್ರ:17ಎಂಡಿಬಿ1 ಮೂಡುಬಿದಿರೆಯ ಕೃಷಿಸಿರಿ ವೇದಿಕೆಯಲ್ಲಿ ಆಳ್ವಾಸ್ ಕಾಲೇಜಿನ ಪ್ರಸಕ್ತ ವರ್ಷದ  ಪದವಿ ತರಗತಿಗಳನ್ನು ಸಂಸ್ಥೆಯ ಟ್ರಸ್ಟಿ ವಿವೇಕ ಆಳ್ವ ಮಂಗಳವಾರ ಉದ್ಘಾಟಿಸಿದರು.   

ಮೂಡುಬಿದಿರೆ: ಆಳ್ವಾಸ್ ಕಾಲೇಜು (ಸ್ವಾಯತ್ತ) ವತಿಯಿಂದ 2025-26ನೇ ಸಾಲಿನ ಪದವಿ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ ಅಂಕುರ ಆಳ್ವಾಸ್‌ನ ಕೃಷಿಸಿರಿ ವೇದಿಕೆಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ, ವಿದ್ಯಾರ್ಥಿಗಳು ಪದವಿ ಶಿಕ್ಷಣದ ಮೂಲ ಉದ್ದೇಶವನ್ನು ಅರಿಯಬೇಕು. ಆಳ್ವಾಸ್ ಶಿಕ್ಷಣ ಸಂಸ್ಥೆ ತನ್ನ ಸಮಕಾಲೀನ ಶಿಕ್ಷಣದ ಮೂಲಕ ವಿದ್ಯಾರ್ಥಿಗಳಿಗೆ ಪ್ರಪಂಚದ ಆಧುನಿಕ ಅಗತ್ಯಗಳಿಗೆ ತಕ್ಕಂತಹ ಜ್ಞಾನ ಮತ್ತು ಕೌಶಲಗಳನ್ನು ನೀಡುತ್ತಿದೆ. ಸ್ವಾಯತ್ತ ಕಾಲೇಜಿನ ನೆಲೆಯಲ್ಲಿ ನಿತ್ಯ ಬದಲಾಗುತ್ತಿರುವ ಉದ್ಯೋಗ ಮಾರುಕಟ್ಟೆ, ತಂತ್ರಜ್ಞಾನ, ಸಾಮಾಜಿಕ ಬದಲಾವಣೆಗಳಿಗೆ ತಕ್ಕಂತೆ ಪಠ್ಯ ಕ್ರಮವನ್ನು ರೂಪಿಸಲಾಗುತ್ತಿದೆ. ಇವು ವಿದ್ಯಾರ್ಥಿಗಳಲ್ಲಿ ವಾಸ್ತವಿಕ ಜ್ಞಾನ, ತಂತ್ರಜ್ಞಾನಾಧಾರಿತ ಕೌಶಲಗಳು, ಸೃಜನಾತ್ಮಕತೆ ಮತ್ತು ವಿಶ್ಲೇಷಣಾತ್ಮಕ ಚಿಂತನೆಯ ಸಾಮರ್ಥ್ಯವನ್ನು ಬೆಳೆಸುತ್ತದೆ ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲ ಕುರಿಯನ್ ಮಾತನಾಡಿ, ಪದವಿ ಹಂತದಲ್ಲಿ ಪೋಷಕರು ಮಕ್ಕಳ ಬೆಳೆವಣಿಗೆಯನ್ನು ಹತ್ತಿರದಿಂದ ಗಮನಿಸುವ ಕೆಲಸವನ್ನು ಮಾಡಬೇಕು. ಈ ಮೂರು ವರ್ಷ ಬರೀ ಶಿಕ್ಷಣ ಮಾತ್ರವಲ್ಲದೇ ಅದರ ಹೊರತಾಗಿ ಸಾಮರ್ಥ್ಯಗಳ ವೃದ್ಧಿಯತ್ತಾ ಕೂಡ ಗಮನಕೊಡಬೇಕು ಎಂದು ಹೇಳಿದರು.

ADVERTISEMENT

ಆಳ್ವಾಸ್ ಕಾಲೇಜು (ಸ್ವಾಯತ್ತ) ಶೈಕ್ಷಣಿಕ ಕುಲಸಚಿವ ಡಾ.ಟಿ.ಕೆ.ರವೀಂದ್ರನ್, ಪರೀಕ್ಷಾಂಗ ಕುಲಸಚಿವ ನಾರಾಯಣ ಶೆಟ್ಟಿ, ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು. ಕನ್ನಡ ವಿಭಾಗದ ಮುಖ್ಯಸ್ಥ ಯೋಗೀಶ್ ಕೈರೋಡಿ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.