ADVERTISEMENT

ದಕ್ಷಿಣ ಕನ್ನಡ: ಕೆಪಿಸಿಸಿ ನಿಯೋಗದಿಂದ ಪ್ರವಾಸ ಇಂದು

​ಪ್ರಜಾವಾಣಿ ವಾರ್ತೆ
Published 4 ಜೂನ್ 2025, 23:30 IST
Last Updated 4 ಜೂನ್ 2025, 23:30 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಮಂಗಳೂರು: ಕರಾವಳಿಯಲ್ಲಿ ಶಾಂತಿ ಮರುಸ್ಥಾಪನೆ ಬಗ್ಗೆ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ನೀಡಲು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ನಿಯೋಗ ಇದೇ 5ರಂದು ಜಿಲ್ಲೆಗೆ ಭೇಟಿ ನೀಡಲಿದೆ.

‘ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ನಿಯೋಗವು ಇದೇ 9, 10 ಮತ್ತು 11ರಂದು ಮತ್ತೊಮ್ಮೆ ಪ್ರವಾಸ ಕೈಗೊಂಡು ಧಾರ್ಮಿಕ, ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಹಾಗೂ ರಾಜಕೀಯ ಆಯಾಮಗಳಲ್ಲಿ ಅಧ್ಯಯನ ನಡೆಸಲಿದೆ‘ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ADVERTISEMENT

‘ಕೋಮು ಘರ್ಷಣೆಗಳಿಂದಾಗಿ ಕರಾವಳಿಯ ಅಭಿವೃದ್ಧಿ ಮೇಲಾದ ಪರಿಣಾಮಗಳನ್ನು ತಿಳಿದುಕೊಳ್ಳುವ ಪ್ರಯತ್ನ ಮಾಡಲಿದೆ. ಶಾಂತಿ ಮರುಸ್ಥಾಪನೆಗೆ ವಹಿಸಬೇಕಾದ ಕ್ರಮಗಳ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲಿದೆ’ ಎಂದರು.

‘ಎಐಸಿಸಿ ಪ್ರಧಾನ ಕಾರ್ಯದರ್ಶಿ ಸಯ್ಯದ್ ನಾಸೀರ್ ಹುಸೇನ್ ನೇತೃತ್ವದ ಈ ನಿಯೋಗದಲ್ಲಿ ಶಾಸಕ ಎನ್.ಎ. ಹ್ಯಾರಿಸ್, ಎಐಸಿಸಿ ಕಾರ್ಯದರ್ಶಿ ರೋಜಿ ಜಾನ್, ಕೆಪಿಸಿಸಿ ಉಪಾಧ್ಯಕ್ಷ ವಿ.ಆ‌ರ್. ಸುದರ್ಶನ್, ಮಾಜಿ ಸಚಿವರಾದ ಜಯಪ್ರಕಾಶ್ ಹೆಗ್ಡೆ, ಕಿಮ್ಮನೆ ರತ್ನಾಕರ್ ಇದ್ದಾರೆ. ನಾನು ಈ ನಿಯೋಗದ ಸದಸ್ಯ.  ವಿವಿಧ ಸಂಘಟನೆಗಳು, ಸಾಮಾಜಿಕ, ಧಾರ್ಮಿಕ, ರಾಜಕೀಯ ಮುಖಂಡರ ಜತೆ ನಿಯೋಗವು ಸಮಾಲೋಚನೆ ನಡೆಸಲಿದೆ’ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.