ADVERTISEMENT

63 ಕುಟುಂಬಗಳಿಗೆ ಪರಿಹಾರ ವಿತರಣೆ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2021, 3:16 IST
Last Updated 21 ಡಿಸೆಂಬರ್ 2021, 3:16 IST
ಬಂಟ್ವಾಳ ತಾಲ್ಲೂಕಿನಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರದಿಂದ ಮಂಜೂರಾದ ಪರಿಹಾರಧನವನ್ನು ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ವಿತರಿಸಿದರು.
ಬಂಟ್ವಾಳ ತಾಲ್ಲೂಕಿನಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರದಿಂದ ಮಂಜೂರಾದ ಪರಿಹಾರಧನವನ್ನು ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ವಿತರಿಸಿದರು.   

ಬಂಟ್ವಾಳ: ತಾಲ್ಲೂಕಿನಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರದಿಂದ ಬಿಡುಗಡೆಯಾಗಿದ್ದ ತಲಾ 1 ಲಕ್ಷ ಮೊತ್ತದ ಪರಿಹಾರದ ಚೆಕ್‌ ಅನ್ನು ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಭಾನುವಾರ ವಿತರಿಸಿದರು.

ಪರಿಹಾರ ಕೋರಿ 216 ಅರ್ಜಿಗಳು ಸಲ್ಲಿಕೆಯಾಗಿದ್ದವು. ಇದರಲ್ಲಿ 192 ಅರ್ಜಿಗಳನ್ನು ಆಯ್ಕೆಮಾಡಲಾಗಿತ್ತು. ಈಗ ಮೊದಲ ಕಂತಿನಲ್ಲಿ 63 ಕುಟುಂಬ ಗಳಿಗೆ ಪರಿಹಾರ ವಿತರಿಸಲಾಗಿದೆ’ ಎಂದು ಶಾಸಕ ರಾಜೇಶ ನಾಯ್ಕ್ ಹೇಳಿದರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಕಮಲಾಕ್ಷಿ ಕೆ.ಪೂಜಾರಿ, ಉಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುರೇಶ್ ಮೈರ, ವೀರಕಂಭ ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ್, ಬರಿಮಾರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ, ಉಪಾಧ್ಯಕ್ಷ ಸದಾಶಿವ ಬರಿಮಾರು, ಅಮ್ಮುಂಜೆ ಗ್ರಾಮ ಪಂಚಾಯಿತಿ ಅಧ್ಯಕ್ಷ ವಾಮನ ಆಚಾರ್ಯ, ರಾಯಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರಶ್ಮಿತ್ ಶೆಟ್ಟಿ ಕೈತ್ರೋಡಿ, ಮಂಚಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಮೋಹನದಾಸ್, ನರಿಕೊಂಬು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಪ್ರಕಾಶ್ ಮಡಿಮುಗೆರು, ಪುರಸಭಾ ಸದಸ್ಯೆ ಮೀನಾಕ್ಷಿ, ಉಪ ತಹಶೀಲ್ದಾರ್ ನರೇಂದ್ರನಾಥ್ ಭಟ್, ಕಂದಾಯ ನಿರೀಕ್ಷಕ ಧರ್ಮಸಾಮ್ರಾಜ್ಯ, ಮಂಜುನಾಥ್ ಕೆ.ಎಚ್., ಕುಮಾರ್ ಟಿ.ಸಿ. ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT