ADVERTISEMENT

ಅವಹೇಳನ: ಕಾಂಗ್ರೆಸ್‌ನಿಂದ ದೂರು

​ಪ್ರಜಾವಾಣಿ ವಾರ್ತೆ
Published 11 ಜುಲೈ 2025, 4:56 IST
Last Updated 11 ಜುಲೈ 2025, 4:56 IST
ಶಾಸಕರನ್ನು ಅವಹೇಳನ ಮಾಡಿರುವ ಆರೋಪಿ ವಿರುದ್ಧ ಪ್ರಕರಣ ದಾಖಲಿಸುವಂತೆ ಉಪ್ಪಿನಂಗಡಿ ಕಾಂಗ್ರೆಸ್ ವತಿಯಿಂದ ದೂರು ನೀಡಲಾಯಿತು
ಶಾಸಕರನ್ನು ಅವಹೇಳನ ಮಾಡಿರುವ ಆರೋಪಿ ವಿರುದ್ಧ ಪ್ರಕರಣ ದಾಖಲಿಸುವಂತೆ ಉಪ್ಪಿನಂಗಡಿ ಕಾಂಗ್ರೆಸ್ ವತಿಯಿಂದ ದೂರು ನೀಡಲಾಯಿತು   

ಉಪ್ಪಿನಂಗಡಿ: ಪುತ್ತೂರಿನಲ್ಲಿ ನಡೆದ ಹಿಂದೂ ಜಾಗರಣ ವೇದಿಕೆಯ ಪ್ರತಿಭಟನೆಯಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರನ್ನು ನಿಂದಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಯಿತು.

ಪುತ್ತೂರಿನ ದರ್ಬೆಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಅಜಿತ್ ಮಡಿಕೇರಿ ಎಂಬಾತ ಶಾಸಕರನ್ನು ಅವಹೇಳನಕಾರಿಯಾಗಿ ನಿಂದಿಸಿದ್ದಾನೆ. ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಲಾಗಿದೆ.

ನಿಯೋಗದಲ್ಲಿ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಯು.ಟಿ.ತೌಸೀಫ್, ಮಾಜಿ ಅಧ್ಯಕ್ಷ ಡಾ.ರಾಜಾರಾಂ ಕೆ.ಬಿ., ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ, ಮುಖಂಡರಾದ ನಝೀರ್ ಮಠ, ಅನಿ ಮಿನೇಜಸ್, ಕೊಪ್ಪಳ, ರವೀಂದ್ರ ಪಟಾರ್ತಿ, ಅಬ್ದುಲ್ ರಹಿಮಾನ್, ಶಬ್ಬೀರ್ ಕೆಂಪಿ, ಪ್ರೆಸಿಲ್ಲಾ ಡಿಸೋಜ ವಳಾಲು ಭಾಗವಹಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.