ADVERTISEMENT

ಸ್ನೇಹಮಯಿ ಕೃಷ್ಣ ವಿರುದ್ಧ ಬೆಳ್ತಂಗಡಿ ಠಾಣೆಗೆ ದೂರು

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2025, 23:50 IST
Last Updated 13 ಸೆಪ್ಟೆಂಬರ್ 2025, 23:50 IST
ಸ್ನೇಹಮಯಿ ಕೃಷ್ಣ
ಸ್ನೇಹಮಯಿ ಕೃಷ್ಣ   

ಮಂಗಳೂರು: ಮೈಸೂರಿನ ಸ್ನೇಹಮಯಿ ಕೃಷ್ಣ ಅವರು ಸೌಜನ್ಯಾ ಕೊಲೆಗೆ ಸಂಬಂಧಿಸಿ ಆಕೆಯ ಮಾವ ಅವರ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ಸೌಜನ್ಯಾ ಕೊಲೆ ಆರೋಪಿಗಳ ಪತ್ತೆಗಾಗಿ 13 ವರ್ಷಗಳಿಂದ ನಡೆಸುತ್ತಿರುವ ಹೋರಾಟದ ದಿಕ್ಕು ತಪ್ಪಿಸುವ ಪ್ರಯತ್ನ ಮಾಡಿದ್ದಾರೆ ಎಂದು ಆರೋಪಿಸಿ ಬೆಳ್ತಂಗಡಿ ತಾಲ್ಲೂಕಿನ ಇಂದಬೆಟ್ಟುವಿನ ವೆಂಕಪ್ಪ ಕೋಟ್ಯಾನ್ ಎಂಬುವರು ಬೆಳ್ತಂಗಡಿ ಠಾಣೆಯ ಸರ್ಕಲ್ ಇನ್ಸ್ಪೆಸ್ಪೆಕ್ಟರ್‌ಗೆ ದೂರು ನೀಡಿದ್ದಾರೆ. 

ಸುಳ್ಳು ದೂರು ನೀಡಿರುವ ಆರೋಪಿಯನ್ನು ಕೋಲಂಕಷವಾಗಿ ತನಿಖೆಗೆ ಒಳಪಡಿಸಬೇಕು. ಈ ರೀತಿ ಸುಳ್ಳು ದೂರು ನೀಡಲು ಪ್ರೇರೇಪಿಸಿರುವವರನ್ನು ಪತ್ತೆಮಾಡಬೇಕು. ಹೋರಾಟಗಾರರಿಗೆ ಅವಮಾನ ಮಾಡಿರುವ ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳ ಬೇಕು ಎಂದು ಅವರು ಒತ್ತಾಯಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT