ಪ್ರಾತಿನಿಧಿಕ ಚಿತ್ರ
ಪುತ್ತೂರು: ತಾಲ್ಲೂಕಿನ ಪುರುಷರಕಟ್ಟೆ- ಶಿಬರ -ನಡುವಾಲ್ ರಸ್ತೆ ಅಭಿವೃದ್ಧಿಗೆ ಮತ್ತು ಶಾಶ್ವತ ರಸ್ತೆ ನಿರ್ಮಾಣಕ್ಕೆ ಅನುದಾನ ಒದಗಿಸಿದ ಶಾಸಕ ಅಶೋಕ್ ರೈ ಅವರಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿ ಅಳವಡಿಸಿದ್ದ ಬ್ಯಾನರ್‌ಗೆ ಹಾನಿ ಮಾಡಿಲಾಗಿದ್ದು, ಈ ಬಗ್ಗೆ ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷ ಹೊನ್ನಪ್ಪ ಕೈಂದಾಡಿ ಅವರು ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದಾರೆ.
ನರಿಮೊಗರು ಗ್ರಾಮದ ನಡುವಾಲ್ ಎಂಬಲ್ಲಿಗೆ ರಸ್ತೆ ಸಂಪರ್ಕ ಇರಲಿಲ್ಲ. ಇಲ್ಲಿಗೆ ಭೇಟಿ ನೀಡಿದ್ದ ಶಾಸಕ ಅಶೋಕ್ ರೈ ಅವರು ಸ್ಥಳೀಯರ ಜತೆ ಮಾತುಕತೆ ನಡೆಸಿ ರಸ್ತೆ ನಿರ್ಮಾಣಕ್ಕೆ ವ್ಯವಸ್ಥೆ ಮಾಡಿದ್ದರು. ಅಲ್ಲದೆ, ರಸ್ತೆ ಕಾಮಗಾರಿಗೆ ₹ 5 ಲಕ್ಷ ಅನುದಾನ ಒದಗಿಸಿದ್ದರು. ಈ ಬಗ್ಗೆ ಸ್ಥಳೀಯರು ಶಾಸಕರಿಗೆ ಅಭಿನಂದನೆ ಸಲ್ಲಿಸಿ ಅಳವಡಿಸಿದ್ದ ಬ್ಯಾನರನ್ನು ಕಿಡಿಗೇಡಿಗಳು ಹರಿದು ಹಾಕಿದ್ದು, ಆರೋಪಿಗಳನ್ನು ಬಂಧಿಸಿ ಕ್ರಮ ಕೈಗೊಳ್ಳುವಂತೆ ಅವರು ದೂರಿನಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.