
ಪ್ರಜಾವಾಣಿ ವಾರ್ತೆ
ಉಳ್ಳಾಲ: ಇಲ್ಲಿಗೆ ಸಮೀಪದ ಕೊಂಡಾಣ ಬಂಟ ಪಿಲಿಚಾಮುಂಡಿ ದೈವಸ್ಥಾನದ ಕಾಣಿಕೆ ಹುಂಡಿಯಲ್ಲಿ ಕಾಂಡೋಮ್ ಪತ್ತೆಯಾಗಿದೆ.
ಆಡಳಿತ ಸಮಿತಿ ಭಾನುವಾರ ಹುಂಡಿಯನ್ನು ತೆರೆಯುವ ಸಂದರ್ಭ ಈ ವಿಚಾರ ಬೆಳಕಿಗೆ ಬಂದಿದೆ.
ಕೆಲ ದಿನಗಳ ಹಿಂದೆ ಉಳ್ಳಾಲ ಭಾಗದಲ್ಲಿರುವ ಕೊರಗಜ್ಜನ ಕಟ್ಟೆಯ ಕಾಣಿಕೆ ಹುಂಡಿಯಲ್ಲಿ ಇದೇ ರೀತಿಯ ಪ್ರಕರಣ ನಡೆದಿತ್ತು.
ಅದೇ ಸಂದರ್ಭದಲ್ಲಿ ಕೊಂಡಾಣ ದೈವಸ್ಥಾನದಲ್ಲಿಯೂ ಆರೋಪಿಗಳು ದುಷ್ಕೃತ್ಯ ಎಸಗಿರುವ ಸಾಧ್ಯತೆಗಳಿವೆ.
ಉಳ್ಳಾಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.