ADVERTISEMENT

ಚುನಾವಣಾ ಪ್ರಚಾರಕ್ಕೆ ಕುದ್ರೋಳಿಯಲ್ಲಿ ಚಾಲನೆ

ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿದ ಜನಾರ್ದನ ಪೂಜಾರಿ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2024, 7:07 IST
Last Updated 27 ಮಾರ್ಚ್ 2024, 7:07 IST
<div class="paragraphs"><p>ಲೋಕಸಭಾ ಚುನಾವಣೆ ಸಲುವಾಗಿ ಕಾಂಗ್ರೆಸ್ ಪಕ್ಷವು ಲಾಲ್‌ಬಾಗ್‌ನಲ್ಲಿ ಆರಂಭಿಸಿರುವ&nbsp; ಕಚೇರಿಯನ್ನು ಜನಾರ್ದನ ಪೂಜಾರಿ ಅವರು ಮಂಗಳವಾರ ಉದ್ಘಾಟಿಸಿದರು.  ಪ್ರ</p></div>

ಲೋಕಸಭಾ ಚುನಾವಣೆ ಸಲುವಾಗಿ ಕಾಂಗ್ರೆಸ್ ಪಕ್ಷವು ಲಾಲ್‌ಬಾಗ್‌ನಲ್ಲಿ ಆರಂಭಿಸಿರುವ  ಕಚೇರಿಯನ್ನು ಜನಾರ್ದನ ಪೂಜಾರಿ ಅವರು ಮಂಗಳವಾರ ಉದ್ಘಾಟಿಸಿದರು. ಪ್ರ

   

ಪ್ರಜಾವಾಣಿ ಚಿತ್ರ 

ಮಂಗಳೂರು: ಕೇಂದ್ರದ ಮಾಜಿ ಸಚಿವ ಬಿ.ಜನಾರ್ಧನ ಪೂಜಾರಿ ಅವರು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಪದ್ಮರಾಜ ಆರ್‌. ಅವರಿಗೆ ಕುದ್ರೋಳಿ ಗೋಕರ್ಣನಾಥೇಶ್ವರ ಕ್ಷೇತ್ರದ ಪ್ರಾಂಗಣದಲ್ಲಿ ಕಾಂಗ್ರೆಸ್ ಧ್ವಜವನ್ನು ಹಸ್ತಾಂತರಿಸುವ ಮೂಲಕ ಚುನಾವಣಾ ಪ್ರಚಾರಕ್ಕೆ ಮಂಗಳವಾರ ಚಾಲನೆ ನೀಡಿದರು.

ADVERTISEMENT

ಕಾಂಗ್ರೆಸ್‌ ಅಭ್ಯರ್ಥಿಯು ಪೂಜಾರಿ ಅವರಿಂದ ಆಶೀರ್ವಾದ ಪಡೆದರು.

ಸುದ್ದಿಗಾರರ ಜೊತೆ ಮಾತನಾಡಿದ ಪೂಜಾರಿ, ‘ಈ ಸಲ ಪದ್ಮರಾಜ್‌ ಗೆದ್ದೇ ಗೆಲ್ಲುತ್ತಾರೆ’ ಎಂದರು.

ಇದಕ್ಕೂ ಮುನ್ನ ಪಕ್ಷದ ವತಿಯಿಂದ ಲಾಲ್‌ಭಾಗ್‌ನಲ್ಲಿ ಆರಂಭಿಸಿರುವ ಪಕ್ಷದ ಲೋಕಸಭಾ ಚುನಾವಣಾ ಕಚೇರಿಯನ್ನೂ ಅವರು ಉದ್ಘಾಟಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್, ಜಿಲ್ಲಾ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಬಿ. ರಮಾನಾಥ ರೈ, ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ, ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ, ವಕ್ತಾರರಾದ ಪ್ರತಿಭಾ ಕುಳಾಯಿ, ಮುಖಂಡರಾದ ಅಭಯಚಂದ್ರ ಜೈನ್, ಶಕುಂತಳಾ ಶೆಟ್ಟಿ, ಜೆ.ಆರ್. ಲೋಬೊ, ವಿಜಯ ಕುಮಾರ್ ಶೆಟ್ಟಿ, ಬಿ.ಇಬ್ರಾಹಿಂ, ಕೆ.ಅಶ್ರಫ್‌, ಪಾಲಿಕೆಯ ವಿರೋಧ ಪಕ್ಷದ ನಾಯಕ ಪ್ರವೀಣಚಂದ್ರ ಆಳ್ವ, ಪಾಲಿಕೆ ಸದಸ್ಯರಾದ ನವೀನ್ ಡಿಸೋಜ, ಅನಿಲ್ ಕುಮಾರ್‌, ಜಿಲ್ಲಾ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್, ಬ್ಲಾಕ್ ಕಾಂಗ್ರೆಸ್ ಸಮಿತಿಗಳು, ಎನ್‌ಎಸ್‌ಯುಐ, ಸೇವಾದಳದ ಪದಾಧಿಕಾರಿಗಳು ಭಾಗವಹಿಸಿದ್ದರು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.