
ಪುತ್ತೂರು: ರಾಜ್ಯದಲ್ಲಿ ದಾನ ಧರ್ಮ ಮಾಡುವ ಕೈ ಅಧಿಕಾರಕ್ಕೆ ಬಂದ ಕಾರಣ ಬಡವರಿಗೆ ಪಂಚ ಗ್ಯಾರಂಟಿ ನೀಡಲು ಸಾಧ್ಯವಾಗಿದೆ. ಇದನ್ನು ಸಹಿಸದ ಬಿಜೆಪಿಯವರು ಟೀಕೆ ಮಾಡುತ್ತಿದ್ದಾರೆ. ಬಿಜೆಪಿಯವರು ಎಷ್ಟೇ ತಿಪ್ಪರಲಾಗ ಹೊಡೆದರೂ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದನ್ನು ತಡೆಯಲು ಸಾಧ್ಯವಿಲ್ಲ. ಮತ್ತೆ ಅಧಿಕಾರಕ್ಕೆ ಬರುವುದು ಹೇಗೆ ಎಂಬುದು ನಮಗೆ ಗೊತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ₹ 2.5 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕಾಂಗ್ರೆಸ್ ಭವನಕ್ಕೆ ಶುಕ್ರವಾರ ರಾತ್ರಿ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.
ಕಾರ್ಯಕರ್ತರು ನಿರಾಸೆ ಆಗಬೇಡಿ. ಬೇರೆ ಬೇರೆ ರಾಜ್ಯದ ಫಲಿತಾಂಶದ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ. ಮುಂದಿನ ದಿನಗಳಲ್ಲಿ ದ.ಕ.ಜಿಲ್ಲೆಯಲ್ಲಿಯೂ ಕಾಂಗ್ರೆಸ್ ಪರ ವಾತಾವರಣ ಇರಲಿದೆ. ಪುತ್ತೂರು ಕಾಂಗ್ರೆಸ್ ಭವನಕ್ಕೆ ಕೆಪಿಸಿಸಿ ವತಿಯಿಂದ ₹ 10 ಲಕ್ಷ ನೀಡುವುದಾಗಿ ಅವರು ಘೋಷಿಸಿದರು.
ಶಾಸಕ ಅಶೋಕ್‌ಕುಮಾರ್ ರೈ, ಕರ್ನಾಟಕ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ, ಕೆಪಿಸಿಸಿ ಉಪಾಧ್ಯಕ್ಷ ರಮಾನಾಥ ರೈ, ಕೆಪಿಸಿಸಿ ಕಾರ್ಯದರ್ಶಿ ಎಂ.ಎಸ್.ಮಹಮ್ಮದ್, ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಮಾತನಾಡಿದರು.
ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ, ಪಕ್ಷದ ಪ್ರಮುಖರಾದ ಪದ್ಮರಾಜ್ ಆರ್.ಪೂಜಾರಿ, ಮಮತಾ ಗಟ್ಟಿ, ಶಾಲೆಟ್ ಪಿಂಟೊ, ಎಚ್.ಮಹಮ್ಮದ್ ಅಲಿ, ಉಷಾ ಅಂಚನ್, ಅಮಲ ರಾಮಚಂದ್ರ, ಉಮಾನಾಥ ಶೆಟ್ಟಿ ಪೆರ್ನೆ, ಎಂ.ಬಿ.ವಿಶ್ವನಾಥ ರೈ, ಡಾ.ರಾಜಾರಾಮ್ ಕೆ.ಬಿ., ಯು.ಟಿ ತೌಸೀಫ್ ಉಪ್ಪಿನಂಗಡಿ, ಅಬ್ದುಲ್ ರಹಮಾನ್ ಅಝಾದ್, ಜೋಕಿಂ ಡಿಸೋಜ, ಫಾರೂಕ್ ಪೆರ್ನೆ, ಅಬ್ದುಲ್ ನೆಲಪ್ಪಾಡ್, ಡಾ.ರಘು ಬೆಳ್ಳಿಪ್ಪಾಡಿ, ಅನಿತಾ ಹೇಮನಾಥ ಶೆಟ್ಟಿ, ನೂರುದ್ದೀನ್ ಸಾಲ್ಮರ, ಶಶಿಕಿರಣ್ ರೈ ಭಾಗವಹಸಿದ್ದರು.
ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಸ್ವಾಗತಿಸಿದರು. ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ ವಂದಿಸಿದರು. ಜಿಲ್ಲಾ ಕಾಂಗ್ರೆಸ್ ವಕ್ತಾರ ಮಹಮ್ಮದ್ ಬಡಗನ್ನೂರು ನಿರೂಪಿಸಿದರು.
ಪ್ರಾರ್ಥನೆ ಎಂದಿಗೂ ವಿಫಲವಾಗದು: ಭಿನ್ನಾಭಿಪ್ರಾಯ, ಗುಂಪುಗಾರಿಕೆ ಎಂದೆಲ್ಲಾ ಮಾಧ್ಯಮಗಳು ಹೇಳುತ್ತಿದೆ. ಆದರೆ, ನಮ್ಮಲ್ಲಿ ಯಾವುದೇ ಗುಂಪುಗಾರಿಕೆಗಳಿಲ್ಲ. ಹೈಕಮಾಂಡ್ ಹೇಳಿದ ಹಾಗೆ ನಾವು ಮಾಡುವುದು ಬಿಟ್ಟರೆ ಬೇರೆ ಏನೂ ಇಲ್ಲ. ಯಾವುದೇ ಆಸೆ ಪಡುವುದು ತಪ್ಪಲ್ಲ. ಅದಕ್ಕಾಗಿ ಪ್ರಾರ್ಥಿಸಬೇಖು. ಪ್ರಯತ್ನ ವಿಫಲ ಆಗಬಹುದು. ಆದರೆ, ಪ್ರಾರ್ಥನೆ ಎಂದಿಗೂ ವಿಫಲವಾಗದು ಎಂದು ಡಿ.ಕೆ.ಶಿವಕುಮಾರ್ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.