ADVERTISEMENT

ಸುಳ್ಯ ಕಾಂಗ್ರೆಸ್ ಸಭೆಯಲ್ಲಿ ಅಸಮಾಧಾನ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2020, 2:12 IST
Last Updated 9 ಸೆಪ್ಟೆಂಬರ್ 2020, 2:12 IST
ಸುಳ್ಯದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು
ಸುಳ್ಯದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು   

ಸುಳ್ಯ: ‘ತಳಮಟ್ಟದಿಂದ ಪಕ್ಷ ಸಂಘಟನೆ ಮಾಡುವ ಮೂಲಕ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ. ಇದಕ್ಕೆ ಎಲ್ಲ ನಾಯಕರು, ಕಾರ್ಯಕರ್ತರು ಕೈ ಜೋಡಿಸಬೇಕು’ ಎಂದು ಜಿಲ್ಲಾ ಯುವ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಮಿಥುನ್ ರೈ ಹೇಳಿದರು.

ಅವರು ಮಂಗಳವಾರ ಸುಳ್ಯದ ಯುವಜನ ಸಂಯುಕ್ತ ಮಂಡಳಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್. ಜಯಪ್ರಕಾಶ್ ರೈ, ಕಾಂಗ್ರೆಸ್ ನಾಯಕರಾದ ಭರತ್ ಮುಂಡೋಡಿ, ಧನಂಜಯ ಅಡ್ಪಂಗಾಯ, ಸಿದ್ದೀಕ್ ಕೊಕ್ಕೊ, ಎಸ್. ಸಂಶುದ್ದೀನ್, ಎಂ.ವೆಂಕಪ್ಪ ಗೌಡ, ಜಿ.ಕೆ.ಹಮೀದ್, ಕಿರಣ್ ಬುಡ್ಲೆಗುತ್ತು, ಪಿ.ಎಸ್.ಗಂಗಾಧರ, ಸುರೇಶ್ ಅಮೈ ಇದ್ದರು.

ADVERTISEMENT

ಅಸಮಾಧಾನ: ಯುವ ಕಾಂಗ್ರೆಸ್ ಸಭೆಯಲ್ಲಿ ನಾಯಕರ ಅಸಮಾಧಾನ ಉಂಟಾಗಿದ್ದರಿಂದ ಸಭೆ ಅರ್ಧದಲ್ಲಿ ಮುಕ್ತಾಯವಾಯಿತು. ನಂತರ ಮಿಥುನ್ ರೈ ಮಧ್ಯಸ್ಥಿಕೆಯಲ್ಲಿ ರಾಜೀಸಂಧಾನವೂ ನಡೆಯಿತು.

ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ.ವೆಂಕಪ್ಪ ಗೌಡರು ಭಾಷಣಮಾಡಲು ಆರಂಭಿಸಿದಾಗ ವೇದಿಕೆಯಲ್ಲಿದ್ದ ಜಿಲ್ಲಾ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಜಿಲ್ಲಾ ಘಟಕದಅಧ್ಯಕ್ಷ ಧನಂಜಯ ಅಡ್ಪಂಗಾಯ ಅವರು, ‘ನೀವು ಅಧ್ಯಕ್ಷರಾಗಿದ್ದ ವೇಳೆ ಎಷ್ಟು ಸ್ಥಾನ ಗೆದ್ದಿರಿ?’ ಎಂದು ಅಸಮಾಧಾನ ಹೊರ ಹಾಕಿದರು. ಮಿಥುನ್‌ ರೈ ಅವರನ್ನು ಸಮಾಧಾನಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.