ADVERTISEMENT

ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2022, 7:11 IST
Last Updated 1 ಏಪ್ರಿಲ್ 2022, 7:11 IST
ತೈಲ ಬೆಲೆ ಮತ್ತು ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಮಂಗಳೂರಿನಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.
ತೈಲ ಬೆಲೆ ಮತ್ತು ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಮಂಗಳೂರಿನಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.   

ಮಂಗಳೂರು: ಪೆಟ್ರೋಲ್, ಡೀಸೆಲ್‌, ಅಡುಗೆ ಅನಿಲ ಮತ್ತು ಜೀವನಾವಶ್ಯಕ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಗುರುವಾರ ನಗರದ ಮಹಾತ್ಮಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಲಾಯಿತು.

‘ಕೋವಿಡ್‌ನಿಂದಾಗಿ ಜನರು ತತ್ತರಿಸಿ ಹೋಗಿದ್ದಾರೆ. ಆ ಸಂಕಷ್ಟದಿಂದ ಇನ್ನೂ ಚೇತರಿಸಿಕೊಂಡಿಲ್ಲ. ಅದರ ಮಧ್ಯೆ ಅಗತ್ಯ ವಸ್ತುಗಳು ಮತ್ತು ತೈಲ ಬೆಲೆಗಳನ್ನು ನಿರಂತರವಾಗಿ ಏರಿಸಲಾಗುತ್ತಿದೆ. ಇದರಿಂದ ಬಡ ಮತ್ತು ಮಧ್ಯಮ ವರ್ಗದ ಜನರ ಬದುಕು ದುಸ್ತರವಾಗಿದೆ’ ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಪ್ರಕಾಶ್ ಬಿ. ಸಾಲ್ಯಾನ್, ಮುಖಂಡರಾದ ಶಶಿಧರ್ ಹೆಗ್ಡೆ, ಮಹಮ್ಮದ್ ಕುಂಜತ್ತ್ ಬೈಲ್, ರಜನೀಶ್ ಕಾಪಿಕಾಡ್, ಲ್ವಾರೆನ್ಸ್ ಡಿಸೋಜ, ವಿಶ್ವಾಸ್ ಕುಮಾರ್‌ ದಾಸ್ ಮಾತನಾಡಿದರು.

ADVERTISEMENT

ಪಾಲಿಕೆ ಸದಸ್ಯ ಶಂಸುದ್ದೀನ್ ಕುದ್ರೋಳಿ, ಸಮರ್ಥ್ ಭಟ್, ಅನಿಲ್ ಕುಮಾರ್, ಶಂಸುದ್ದೀನ್ ಬಂದರ್, ರಾಕೇಶ್ ದೇವಾಡಿಗ, ಅಪ್ಪಿಲತಾ, ಶಾಂತಲಾ ಗಟ್ಟಿ, ಮಂಜುಳಾ ನಾಯಕ್, ಮೀನಾ ಟೆಲ್ಲಿಸ್, ಯೋಗೀಶ್ ನಾಯಕ್, ಗಿರೀಶ್ ಶೆಟ್ಟಿ, ಕಿರಣ್ ಬುಡ್ಲೆಗುತ್ತು, ಟಿ.ಸಿ. ಗಣೇಶ್, ರಕ್ಷಿತ್ ಸಾಲ್ಯಾನ್, ಕ್ಲಿಪರ್ಡ್, ಪ್ರೇಮ್‍ನಾಥ್ ಪಿ.ಬಿ, ರವಿ ಅಮೀನ್, ಜಯರಾಜ್ ಕೋಟ್ಯಾನ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.