ADVERTISEMENT

ಬಂಟ್ವಾಳ: ಅಗ್ನಿಪಥ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 29 ಜೂನ್ 2022, 8:14 IST
Last Updated 29 ಜೂನ್ 2022, 8:14 IST
   

ಬಂಟ್ವಾಳ: ದೇಶದಲ್ಲಿ ಯುವಜನತೆಗೆ ಉದ್ಯೋಗ ನೀಡುವ ಭರವಸೆ ನೀಡಿ ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಅಗ್ನಿಪಥ್ ಯೋಜನೆ ಮೂಲಕ ಸೈನಿಕರಿಗೂ ಉದ್ಯೋಗ ಭದ್ರತೆ ಇಲ್ಲದಂತೆ ಮಾಡಿರುವುದು ನಾಚಿಕೆಗೇಡು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.

ಇಲ್ಲಿನ ಬಿ.ಸಿ.ರೋಡು ಮಿನಿ ವಿಧಾನಸೌಧ ಎದುರು ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಅಗ್ನಿಪಥ್ ಯೋಜನೆ ವಿರುದ್ಧ ಬುಧವಾರ ನಡೆದ ಧರಣಿ ಸತ್ಯಾಗ್ರಹದಲ್ಲಿ ಅವರು ಮಾತನಾಡಿದರು.

ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷರಾದ ಬೇಬಿ ಕುಂದರ್ ಮತ್ತು ಸುದೀಪ್ ಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಬಿ.ಪದ್ಮಶೇಖರ್ ಜೈನ್, ಎಂ. ಎಸ್. ಮೊಹಮ್ಮದ್, ಸಂಜೀವ ಪೂಜಾರಿ ಬಿರ್ವ, ಮಾಜಿ ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಅಬ್ಬಾಸ್ ಅಲಿ, ಪಿಯೂಸ್ ಎಲ್. ರೊಡ್ರಿಗಸ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ್, ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಸುರೇಶ್ ಜೋರ ಮತ್ತು ಇಬ್ರಾಹಿಂ ನವಾಝ್ ಬಡಕಬೈಲು, ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ವಿ. ಪೂಜಾರಿ, ಪುರಸಭೆ ಅಧ್ಯಕ್ಷ ಮೊಹಮ್ಮದ್ ಶರೀಫ್, ಉಪಾಧ್ಯಕ್ಷೆ ಜೇಸಿಂತ ಡಿ'ಸೋಜ, ಸದಸ್ಯರಾದ ಬಿ. ವಾಸು ಪೂಜಾರಿ ಲೋರೆಟ್ಟೋ, ಸಿದ್ಧಿಕ್ ಗುಡ್ಡೆಯಂಗಡಿ, ಲೋಲಾಕ್ಷ ಶೆಟ್ಟಿ, ಗಾಯತ್ರಿ, ಸೇವಾದಾಳ ಜಿಲ್ಲಾ ಅಧ್ಯಕ್ಷ ಜೋಕಿಂ ಡಿ ಸೋಜ, ಪ್ರಮುಖರಾದ ಮಲ್ಲಿಕಾ ವಿ. ಶೆಟ್ಟಿ, ಕೆ.ಪದ್ಮನಾಭ ರೈ, ಚಿತ್ತರಂಜನ್ ಶೆಟ್ಟಿ ಬೊಂಡಾಲ, ಪಿ. ಎ. ರಹೀಂ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.