ADVERTISEMENT

ಕಾಂಗ್ರೆಸ್‌ಗೆ ಮತ್ತೆ ಅಧಿಕಾರಕ್ಕೆ ಬರುವುದು ಖಚಿತ: ಹರೀಶ್ ಕುಮಾರ್

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2021, 15:45 IST
Last Updated 9 ನವೆಂಬರ್ 2021, 15:45 IST
ಮಂಗಳೂರಿನ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ಜರುಗಿದ ಜಿಲ್ಲಾ ಕಾಂಗ್ರೆಸ್ ಕಾಂಗ್ರೆಸ್‌ ಪಕ್ಷದ ಪ್ರಮುಖರ ಸಭೆಯ ಅಧ್ಯಕ್ಷತೆ ವಹಿಸಿ ಅಧ್ಯಕ್ಷ ಕೆ.ಹರೀಶ್ ಕುಮಾರ್ ಮಾತನಾಡಿದರು. ಮಾಜಿ ಸಚಿವರಾದ ಬಿ.ರಮಾನಾಥ ರೈ, ಅಭಯಚಂದ್ರ ಜೈನ್ ಇದ್ದರು.
ಮಂಗಳೂರಿನ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ಜರುಗಿದ ಜಿಲ್ಲಾ ಕಾಂಗ್ರೆಸ್ ಕಾಂಗ್ರೆಸ್‌ ಪಕ್ಷದ ಪ್ರಮುಖರ ಸಭೆಯ ಅಧ್ಯಕ್ಷತೆ ವಹಿಸಿ ಅಧ್ಯಕ್ಷ ಕೆ.ಹರೀಶ್ ಕುಮಾರ್ ಮಾತನಾಡಿದರು. ಮಾಜಿ ಸಚಿವರಾದ ಬಿ.ರಮಾನಾಥ ರೈ, ಅಭಯಚಂದ್ರ ಜೈನ್ ಇದ್ದರು.   

ಮಂಗಳೂರು: ‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವು ಮರಳಿ ಅಧಿಕಾರಕ್ಕೆ ಬರುವ ಎಲ್ಲ ಸಾಧ್ಯತೆಗಳಿವೆ ಎಂಬ ಮುನ್ಸೂಚನೆಯನ್ನು ಇತ್ತೀಚೆಗೆ ನಡೆದ ಉಪಚುನಾವಣೆಯ ಫಲಿತಾಂಶಗಳು ನೀಡಿವೆ’ ಎಂದು ಕಾಂಗ್ರೆಸ್ ಜಿಲ್ಲಾ ಸಮಿತಿ ಅಧ್ಯಕ್ಷ ಕೆ. ಹರೀಶ್ ಕುಮಾರ್ ಹೇಳಿದರು.

ನಗರದ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ಜರುಗಿದ ಪಕ್ಷದ ಜಿಲ್ಲಾ ಘಟಕದ ಪ್ರಮುಖರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಿಜೆಪಿಯ ದುರಾಡಳಿತ, ಬೆಲೆಯೇರಿಕೆ, ನಿರುದ್ಯೋಗ ಮುಂತಾದ ಸಮಸ್ಯೆಗಳು, ಅನೈತಿಕ ಪೊಲೀಸ್‌ಗಿರಿ, ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯಗಳನ್ನು ಜಿಲ್ಲಾ ಕಾಂಗ್ರೆಸ್ ಖಂಡಿಸುತ್ತದೆ ಎಂದರು.

ಅನೈತಿಕ ಗೂಂಡಾಗಿರಿಯ ವಿರುದ್ಧ ಜಿಲ್ಲಾ ಕಾಂಗ್ರೆಸ್ ತೀವ್ರ ಹೋರಾಟ ನಡೆಸಲಿದ್ದು, ಅಲ್ಪಸಂಖ್ಯಾತರ ರಕ್ಷಣೆಗೆ ಬದ್ಧವಾಗಿದೆ. ಪ್ರವಾದಿ ಪೈಗಂಬರ್ ಬಗ್ಗೆ ಸಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಕಿಡಿಗೇಡಿಗಳ ವಿರುದ್ಧ ಖಂಡನಾ ನಿರ್ಣಯ ನಡೆಯಿತು. ಮುಸ್ಲಿಂ ಮಹಿಳೆಯರ ವಿರುದ್ಧ ಚೈತ್ರಾ ಕುಂದಾಪುರ ಅವರು ಪ್ರಚೋದನಕಾರಿ ಭಾಷಣ ಮಾಡಿದ್ದು ಅದನ್ನು ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ ಎಂದು ತಿಳಿಸಿದರು.

ADVERTISEMENT

ಮಾಜಿ ಸಚಿವರಾದ ಬಿ.ರಮಾನಾಥ ರೈ, ಅಭಯಚಂದ್ರ ಜೈನ್, ಮಾಜಿ ಶಾಸಕರಾದ ಶಕುಂತಲಾ ಶೆಟ್ಟಿ, ಜೆ.ಆರ್. ಲೋಬೊ, ಎಐಸಿಸಿ ಕಾರ್ಯದರ್ಶಿಗಳಾದ ಐವನ್ ಡಿಸೋಜ, ಪಿ.ವಿ. ಮೋಹನ್, ಮಾಜಿ ಸಂಸದ ಬಿ. ಇಬ್ರಾಹಿಂ, ಮುಖಂಡರಾದ ಮಿಥುನ್ ರೈ, ಕೋಡಿಜಾಲ್ ಇಬ್ರಾಹಿಂ, ಶಶಿಧರ್ ಹೆಗ್ಡೆ, ಪದಾಧಿಕಾರಿಗಳು, ಮುಖಂಡರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.