ADVERTISEMENT

ಸಿಎಂ ಸಭೆ ನಡೆಸುತ್ತಿದ್ದ ಹೋಟೆಲ್‌ಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಯತ್ನ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2022, 14:09 IST
Last Updated 12 ಏಪ್ರಿಲ್ 2022, 14:09 IST
ಸಿಎಂ ಸಭೆ ನಡೆಸುತ್ತಿದ್ದ ಹೋಟೆಲ್‌ಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಯತ್ನ
ಸಿಎಂ ಸಭೆ ನಡೆಸುತ್ತಿದ್ದ ಹೋಟೆಲ್‌ಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಯತ್ನ   

ಮಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಚಿವ ಈಶ್ವರಪ್ಪ ಬಂಧನ ಮತ್ತು ನ್ಯಾಯಕ್ಕೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ನಡೆಸುತ್ತಿರುವ ನಗರದ ಓಷಿಯನ್ ಪರ್ಲ್ ಹೋಟೆಲ್ ಎದುರು ಮುತ್ತಿಗೆ ಹಾಕಲು ಯತ್ನಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ನಾಯಕರುಗಳ ಸಭೆ ನಡೆಯುತ್ತಿದ್ದ ಸಂದಂರ್ಭದಲ್ಲೇ ಮಿಥುನ್ ರೈ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹೋಟೇಲ್‌ಗೆ ನುಗ್ಗಲು ಯತ್ನಿಸಿದರು. ಕಪ್ಪು ಬಾವುಟವನ್ನು ಪ್ರದರ್ಶಿಸಿ, ಘೋಷಣೆಯನ್ನು ಕೂಡ ಕೂಗಿದರು.

ಏಕಾಏಕಿ ನೂರಾರು ಕಾಂಗ್ರೆಸ್ ಕಾರ್ಯಕರ್ತರನ್ನು ನೋಡಿದ ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್‌. ಶಶಿಕುಮಾರ್‌ ಮತ್ತು ಇತರ ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಿ, ಪ್ರತಿಭಟನಕಾರರನ್ನು ತಡೆದರು.

ADVERTISEMENT

ಬಳಿಕ ಹೆಚ್ಚಿನ ಪೊಲೀಸರು ಸ್ಥಳಕ್ಕೆ ಬಂದು, ಕಾರ್ಯಕರ್ತರನ್ನು ವಶಕ್ಕೆ ಪಡೆದರು. ಹೋಟೆಲ್‌ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್‌ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.