ADVERTISEMENT

ನಿರಂತರ ಮಳೆ: ಕುಕ್ಕೆಯಲ್ಲಿ ಭಕ್ತರು ವಿರಳ

​ಪ್ರಜಾವಾಣಿ ವಾರ್ತೆ
Published 7 ಜುಲೈ 2022, 4:45 IST
Last Updated 7 ಜುಲೈ 2022, 4:45 IST
ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಬರುವ ಭಕ್ತರ ಸಂಖ್ಯೆಯೂ ಕಡಿಮೆಯಾಗಿದೆ.  ಕುಕ್ಕೆಯ ರಥಬೀದಿಯಲ್ಲಿ ಬುಧವಾರ ಕಂಡು ಬಂದ ದೃಶ್ಯ
ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಬರುವ ಭಕ್ತರ ಸಂಖ್ಯೆಯೂ ಕಡಿಮೆಯಾಗಿದೆ.  ಕುಕ್ಕೆಯ ರಥಬೀದಿಯಲ್ಲಿ ಬುಧವಾರ ಕಂಡು ಬಂದ ದೃಶ್ಯ   

ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ ಮುಂದುವರಿದಿದ್ದು, ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರ ಸಂಖ್ಯೆ ಕಡಿಮೆಯಾಗಿದೆ.

ನಿರಂತರ ಮಳೆಯಿಂದ ಭಕ್ತರು ತಮ್ಮ ಯಾತ್ರೆಗಳನ್ನೂ ಮುಂದೂಡಿದ್ದು, ಭಕ್ತರಿಂದ ತುಂಬಿ ತುಳುಕುತ್ತಿದ್ದ ಕುಕ್ಕೆ ಸುಬ್ರಹ್ಮಣ್ಯ ರಥಬೀದಿಯು ಎರಡು ದಿನಗಳಿಂದ ಖಾಲಿ ಖಾಲಿಯಾಗಿದೆ. ಪೇಟೆಯಲ್ಲಿ ಯಾತ್ರಿಕರ ವಾಹನ ಓಡಾಟದ ಸಂಖ್ಯೆಯೂ ಇಳಿಮುಖಗೊಂಡಿದೆ. ವ್ಯಾಪಾರ ವ್ಯವಹಾರಗಳು ಇಳಿಮುಖ ಗೊಂಡಿವೆ ಎನ್ನುತ್ತಾರೆ ವ್ಯಾಪಾರಸ್ಥರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT