ADVERTISEMENT

ಮಲೇರಿಯಾ, ಡೆಂಗಿ, ಚಿಕುನ್‌ ಗುನ್ಯಾ ನಿಯಂತ್ರಿಸಿ: ಜಿಲ್ಲಾಧಿಕಾರಿ ಡಾ. ರಾಜೇಂದ್ರ

ಮಲೇರಿಯಾ/ಡೆಂಗಿ ನಿಯಂತ್ರಣದ ಬಗ್ಗೆ ಜಿಲ್ಲಾಧಿಕಾರಿ ಸಭೆ

​ಪ್ರಜಾವಾಣಿ ವಾರ್ತೆ
Published 22 ಜೂನ್ 2021, 1:35 IST
Last Updated 22 ಜೂನ್ 2021, 1:35 IST
ಮಂಗಳೂರಿನಲ್ಲಿ ಸೋಮವಾರ ಮಲೇರಿಯಾ/ಡೆಂಗಿ ನಿಯಂತ್ರಣದ ಬಗ್ಗೆ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಡಾ. ರಾಜೆಂದ್ರ ಕೆ.ವಿ. ಮಾತನಾಡಿದರು.
ಮಂಗಳೂರಿನಲ್ಲಿ ಸೋಮವಾರ ಮಲೇರಿಯಾ/ಡೆಂಗಿ ನಿಯಂತ್ರಣದ ಬಗ್ಗೆ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಡಾ. ರಾಜೆಂದ್ರ ಕೆ.ವಿ. ಮಾತನಾಡಿದರು.   

ಮಂಗಳೂರು: ಜಿಲ್ಲೆಯಲ್ಲಿ ಮಲೇರಿಯಾ, ಡೆಂಗಿ, ಚಿಕುನ್‌ಗುನ್ಯಾ, ಮುಂತಾದ ರೋಗಗಳ ನಿಯಂತ್ರಣ ಕಾರ್ಯವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದುಜಿಲ್ಲಾಧಿಕಾರಿ ಡಾ. ರಾಜೇಂದ್ರ. ಕೆ. ವಿ. ಅಧಿಕಾರಿಗಳಿಗಳಿಗೆ ಸೂಚನೆ ನೀಡಿದರು.

ಮಲೇರಿಯಾ/ಡೆಂಗಿ ನಿಯಂತ್ರಣದ ಬಗ್ಗೆ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಲಕಾಲಕ್ಕೆ ಘನತ್ಯಾಜ್ಯ ವಿಲೇವಾರಿ ಮಾಡಿ ಸೊಳ್ಳೆ ಉತ್ಪತ್ತಿಗೆ ಅವಕಾಶ ನೀಡಬಾರದು. ಮೀನುಗಾರಿಕಾ ದೋಣಿಗಳಲ್ಲಿ ನೀರು ಸಂಗ್ರಹ ಟ್ಯಾಂಕ್, ಬ್ಯಾರಲ್‍ಗಳನ್ನು ಮುಚ್ಚಳದಿಂದ ಮುಚ್ಚಬೇಕು. ಸಣ್ಣ ದೋಣಿಗಳಲ್ಲಿಯೂ ಮತ್ತು ಪ್ಲಾಸ್ಟಿಕ್ ಕ್ರೇಟ್‍ಗಳಲ್ಲಿ, ಟೈರ್ ಮತ್ತು ವಾಣಿಜ್ಯ ಸಂಕೀರ್ಣಗಳ ಚಾವಣಿ, ಅಂಗಡಿ ಎಳನೀರು ಚಿಪ್ಪುಗಳಲ್ಲಿ ಹಾಗೂ ತಂಪು ಪಾನೀಯದ ಖಾಲಿ ಬಾಟಲ್‍ಗಳಲ್ಲಿ ನೀರು ಸಂಗ್ರಹ, ಸೊಳ್ಳೇ ಉತ್ಪತಾದನೆ ಆಗದಂತೆ ನೋಡಿಕೊಳ್ಳಬೇಕು ಎಂದರು.

ADVERTISEMENT

ಶಿಕ್ಷಣ ಸಂಸ್ಥೆಗಳ ಕಟ್ಟಡಗಳು ಹಾಗೂ ಪರಿಸರದಲ್ಲಿ ನೀರು ನಿಂತು ಸೊಳ್ಳೆಬೆಳೆಯದಂತೆ ನೋಡಿಕೊಳ್ಳಬೇಕು. ಶಾಲಾ-ಕಾಲೇಜು ಆರಂಭಕ್ಕೆ ಮುನ್ನ ಸೊಳ್ಳೆ ಉತ್ಪತ್ತಿ ತಾಣಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಮಾಹಿತಿ ನೀಡಬೇಕು ಹಾಗೂ ಮಲೇರಿಯಾ/ಡೆಂಗಿ ರೋಗದ ಬಗ್ಗೆ ಜಾಗೃತಿ ಮೂಡಿಸಬೇಕು, ರಾಸಾಯನಿಕ ಸಿಂಪಡಿಸಬೇಕು ಹಾಗೂ ಜ್ವರದ ಪ್ರಕರಣಗಳ ಮಾಹಿತಿಯನ್ನು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಆರೋಗ್ಯ ಇಲಾಖೆಗೆ ನೀಡಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಡಾ.ಕುಮಾರ್, ಮಹಾನಗರಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಆಶ್ರಿತ ರೋಗಿಗಳ ನಿಯಂತ್ರಣಾಧಿಕಾರಿ ಡಾ.ನವೀನ್ ಚಂದ್ರ ಕುಲಾಲ್ ಇದ್ದರು.

‘ಸೊಳ್ಳೆ ಕಚ್ಚದಂತೆ ಗಮನಿಸಿ’

ನೀರು ಕಟ್ಟಿನಿಲ್ಲದಂತೆ ಜಾಗ್ರೆ ವಹಿಸಿ, ಸೊಳ್ಳೆಗಳ ನಿಯಂತ್ರಣ ಹಾಗೂ ಆರೋಗ್ಯ ಸುರಕ್ಷತೆ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಅನಾಫಿಲಿಸ್, ಈಡಿಸ್ ಮತ್ತು ಕ್ಯೂಲೆಕ್ಸ್ ಸೊಳ್ಳೆಗಳಿಂದ ಮಲೇರಿಯಾ, ಡೆಂಗಿ, ಚಿಕುನ್‌ಗುನ್ಯಾ, ಆನೆಕಾಲು ರೋಗ ಹಾಗೂ ಮಿದುಳು ಜ್ವರ ಕಾಣಿಸಿಕೊಳ್ಳುತ್ತವೆ. ಮನೆಯ ಸುತ್ತ ಸ್ವಚ್ಛವಾಗಿಟ್ಟುಕೊಳ್ಳಬೇಕು. ಜಿಲ್ಲೆಯಲ್ಲಿ ಜನವರಿಯಿಂದ ಈವರೆಗೆ ಒಟ್ಟು 277 ಪ್ರಕರಣಗಳು ನಗರ ಪ್ರದೇಶಗಳಲ್ಲಿ ಹಾಗೂ ಗ್ರಾಮೀಣ ಭಾಗದಲ್ಲಿ 22 ಮಲೇರಿಯಾ ಪ್ರಕರಣಗಳು ದಾಖಲಾಗಿದೆ ಹಾಗೆಯೆ ಒಟ್ಟು 104 ಡೆಂಗಿ ಪ್ರಕರಣಗಳು ಕಂಡುಬಂದಿದೆ.ಜ್ವರದ ಇದ್ದರೆ ಕಡ್ಡಾಯವಾಗಿ ಮಲೇರಿಯಾ ರಕ್ತ ಪರೀಕ್ಷೆ ಮಾಡಿಸಿ, ಮಂಗಳೂರು ನಗರದ ಬಂದರು, ಬೆಂಗ್ರೆ, ಜೆಪ್ಪು, ಲೇಡಿಹಿಲ್, ಪಡೀಲ್, ಎಕ್ಕೂರು, ಶಕ್ತಿನಗರ, ಕುಲಾಲ್, ಕುಳಾಯಿ ಹಾಗೂ ಸುರತ್ಕಲ್ ಪ್ರದೇಶಗಳಲ್ಲಿ ಹೆಚ್ಚು ಮಲೇರಿಯಾ/ಡೆಂಗಿ ಪ್ರಕರಣಗಳು ಕಂಡುಬರುತ್ತಿವೆ ಈ ಬಗ್ಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಬೇಕು ಎಂದರು. ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.