
ಬಂಟ್ವಾಳ: ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಇಲ್ಲದೇ ಕೇವಲ ಸಹಕಾರಿ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮಾತ್ರ ಸಹಕಾರಿಗಳ ಪರಿಶ್ರಮವಿದ್ದರೆ ಏಳಿಗೆ ಸಾಧ್ಯ. ಜಿಲ್ಲೆಯ ಸಹಕಾರಿ ಕ್ಷೇತ್ರವು ರಾಜ್ಯ ಮಟ್ಟದಲ್ಲಿ ಮುಂಚೂಣಿಯಲ್ಲಿದೆ ಎಂದು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದರು.
ಇಲ್ಲಿನ ಬಿ.ಸಿ.ರೋಡಿನಲ್ಲಿ ಶನಿವಾರ ನಡೆದ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಟಿ.ಜಿ.ರಾಜಾರಾಮ ಭಟ್ ಅವರ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಇದೇ ವೇಳೆ ಟಿ.ಜಿ.ರಾಜಾರಾಮ ಭಟ್, ಜ್ಯೋತಿ ರಾಜಾರಾಮ ಭಟ್ ಅವರನ್ನು ಅಭಿನಂದಿಸಲಾಯಿತು. ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿ, ಮಾಜಿ ಸಚಿವ ಬಿ.ರಮಾನಾಥ ರೈ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ಸ್ಕ್ವ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ, ಸಹಕಾರ ಸಂಘಗಳ ಸಹಾಯಕ ನಿಬಂಧಕಿ ತ್ರಿವೇಣಿ ರಾವ್ ಶುಭ ಮಾತನಾಡಿದರು. ಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್.ಬಿ.ಜಯರಾಮ ರೈ, ಸದಾಶಿವ ಉಳ್ಳಾಲ್, ಕೋಶಾಧಿಕಾರಿ ಅಜಯ್ ಕುಮಾರ್ ಅಜಿಲ ಹಾಜರಿದ್ದರು.
ಅಭಿನಂದನಾ ಸಮಿತಿ ಗೌರವಾಧ್ಯಕ್ಷ , ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ ಪ್ರಾಸ್ತಾವಿಕ ಮಾತನಾಡಿದರು. ಸಮಿತಿ ಅಧ್ಯಕ್ಷ ಜಯಶಂಕರ ಬಾಸ್ರಿತ್ತಾಯ ಸ್ವಾಗತಿಸಿ, ಸುಭಾಶ್ಚಂದ್ರ ಜೈನ್ ವಂದಿಸಿದರು. ಪುಷ್ಪರಾಜ್ ಕುಕ್ಕಾಜೆ ಸನ್ಮಾನಪತ್ರ ವಾಚಿಸಿದರು. ದಿನೇಶ್ ಅಮೀನ್ ಕಾರ್ಯಕ್ರಮ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.