
ಮೂಡುಬಿದಿರೆ: ಸುದೀರ್ಘ ಇತಿಹಾಸವಿರುವ ಮತ್ತು ಸಹಕಾರಿಗಳಿಗೆ ಉತ್ತಮ ಸೇವೆಯನ್ನು ನೀಡುತ್ತಿರುವ ಕೃಷಿ ಪತ್ತಿನ ಸಹಕಾರಿ ಸಂಘಗಳನ್ನು ಸಹಕಾರಿ ಬ್ಯಾಂಕ್‌ಗಳು ಎಂದು ಮರುನಾಮಕರಣಗೊಳಿಸಬೇಕು. ಈ ಬಗ್ಗೆ ಕೇಂದ್ರ ಸಹಕಾರ ಸಚಿವ ಅಮಿತ್ ಶಾ ಅವರಿಗೆ ಮನವಿ ನೀಡಲಾಗಿದೆ ಎಂದು ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದರು.
ಇಲ್ಲಿನ ಎಂಸಿಎಸ್ ಸೊಸೈಟಿ ವತಿಯಿಂದ ಕಲ್ಪವೃಕ್ಷ ಸಭಾಭವನದಲ್ಲಿ ಏಳು ದಿನ ನಡೆಯುವ 72ನೇ ಅಖಿಲ ಭಾರತ ಸಹಕಾರಿ ಸಪ್ತಾಹವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.
ಸೊಸೈಟಿಯ ನೂತನ ಋಣಪರಿಹಾರ ಯೋಜನೆಯ ನಿಬಂಧನೆ ಪತ್ರವನ್ನು ಅವರು ಬಿಡುಗಡೆ ಮಾಡಿದರು. ಸೊಸೈಟಿಯ ಹಿರಿಯ ಸದಸ್ಯರಾದ ಜಾರ್ಜ್ ಮೋನಿಸ್ ಅವರಿಗೆ ₹ 25 ಸಾವಿರ ನಗದಿನೊಂದಿಗೆ ಪ್ರಸಕ್ತ ಸಾಲಿನ ಕಲ್ಪವೃಕ್ಷ ಪ್ರಶಸ್ತಿ ಪ್ರದಾನ ಮಡಲಾಯಿತು.
ಸಿ.ಎಚ್.ಅಬ್ದುಲ್ ಗಫೂರ್ ಮಾತನಾಡಿದರು. ಮೈಸೂರು ಧರ್ಮಪ್ರಾಂತದ ಬಿಷಪ್ ಫ್ರಾನ್ಸಿಸ್ ಸೆರಾವೊ ಮಾತನಾಡಿ, ಜಾತ್ಯತೀತ ಮತ್ತು ಪಕ್ಷಾತೀತ ನೆಲೆಯಲ್ಲಿ ಗ್ರಾಹಕರಿಗೆ ಒಳ್ಳೆಯ ಸೇವೆಯನ್ನು ನೀಡುತ್ತಿರುವ ಎಂಸಿಎಸ್ ಸೊಸೈಟಿ ಅಭಿನಂದನೆಗೆ ಅರ್ಹ ಎಂದರು.
ಸೊಸೈಟಿ ಅಧ್ಯಕ್ಷ ಎಂ.ಬಾಹುಬಲಿ ಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು. ಸಮಾಜ ಮಂದಿರ ಸಭಾದ ಅಧ್ಯಕ್ಷ ಅಭಯಚಂದ್ರ ಜೈನ್, ಧರ್ಮಗುರು ಒನಿಲ್ ಡಿಸೋಜ, ಸಹಕಾರ ಸಂಘಗಳ ಉಪನಿಬಂಧಕರಾದ ಎಚ್.ಎನ್.ರಮೇಶ್, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ಬಾಲ್ಯೊಟ್ಟು ಭಾಗವಹಿಸಿದ್ದರು.
ಶಿರ್ತಾಡಿ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ₹ 1 ಲಕ್ಷ ಮೊತ್ತದ ಚೆಕ್‌ನ್ನು ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ಸ್ವೀಕರಿಸಿದರು.
ಸಹಕಾರ ಶಿಕ್ಷಣ ನಿಧಿಗೆ ₹ 11ಲಕ್ಷ ಮೊತ್ತದ ಚೆಕ್‌ನ್ನು ಸಹಕಾರಿ ತರಬೇತಿ ಕೇಂದ್ರದ ಉಪನ್ಯಾಸಕಿ ಬಿಂದು ನಾಯರ್ ಮೂಲಕ ಹಸ್ತಾಂತರಿಸಲಾಯಿತು.
ಸೊಸೈಟಿಯ ವಿಶೇಷ ಕರ್ತವ್ಯಾಧಿಕಾರಿ ಚಂದ್ರಶೇಖರ್ ಎಂ. ಸ್ವಾಗತಿಸಿದರು. ಚೇತನಾ ರಾಜೇಂದ್ರ ಹೆಗ್ಡೆ ನಿರೂಪಿಸಿದರು.ಸಿಇಒ ರಘುವೀರ್ ಕಾಮತ್ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.