ADVERTISEMENT

ದ.ಕ.: 15 ವೈದ್ಯರಿಗೆ ಸೋಂಕು

​ಪ್ರಜಾವಾಣಿ ವಾರ್ತೆ
Published 1 ಜುಲೈ 2020, 17:31 IST
Last Updated 1 ಜುಲೈ 2020, 17:31 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಆಸ್ಪತ್ರೆಗಳ 15 ಮಂದಿ ವೈದ್ಯರಿಗೆ ಈವರೆಗೆ ಕೋವಿಡ್‌ ಸೋಂಕು ತಗುಲಿರುವುದು ದೃಢಪಟ್ಟಿದೆ.

ನಗರದ ಖಾಸಗಿ ಆಸ್ಪತ್ರೆಯೊಂದರ ಐವರು ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳಿಗೆ ಕೋವಿಡ್‌ ಸೋಂಕು ತಗುಲಿರುವುದು ಕೆಲವು ದಿನಗಳ ಹಿಂದೆ ಖಚಿತವಾಗಿತ್ತು. ಈ ವಿದ್ಯಾರ್ಥಿಗಳು ಕೋವಿಡ್‌ ಸೋಂಕಿತರ ಚಿಕಿತ್ಸಾ ತಂಡದಲ್ಲಿದ್ದರು.

ವೆನ್ಲಾಕ್‌ ಕೋವಿಡ್‌ ವಿಶೇಷ ಆಸ್ಪತ್ರೆಯ ಒಬ್ಬ ಹಾಗೂ ವಿವಿಧ ಖಾಸಗಿ ಆಸ್ಪತ್ರೆಗಳ ಒಂಭತ್ತು ವೈದ್ಯರಿಗೆ ಸೋಂಕು ತಗುಲಿರುವುದು ಮಂಗಳವಾರ ದೃಢಪಟ್ಟಿದೆ. ಈ ಎಲ್ಲ ವೈದ್ಯರೂ ಕೋವಿಡ್‌ ರೋಗಿಗಳ ಚಿಕಿತ್ಸಾ ತಂಡದಲ್ಲಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ADVERTISEMENT

ಜಿಲ್ಲೆಯ ಹಲವು ಆಸ್ಪತ್ರೆಗಳಲ್ಲಿ ಶುಶ್ರೂಷಕಿಯರು ಮತ್ತು ಸಿಬ್ಬಂದಿಗೆ ಕೋವಿಡ್‌ ಸೋಂಕು ತಗುಲಿದೆ. ಮಂಗಳೂರಿನ ಲೇಡಿ ಗೋಷನ್‌ ಆಸ್ಪತ್ರೆಯ ಹಲವು ಸಿಬ್ಬಂದಿ ಸೋಂಕಿತರಾಗಿದ್ದು, ಆಸ್ಪತ್ರೆಯಲ್ಲಿ ಆರು ದಿನಗಳ ಕಾಲ ಹೊರ ಮತ್ತು ಒಳ ರೋಗಿಗಳ ದಾಖಲಾತಿಯನ್ನು ಸ್ಥಗಿತಗೊಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.