ಮಂಗಳೂರು:ಕೋವಿಡ್ ಸೋಂಕು ತಗುಲಿದ್ದ ಮೂಡಬಿದಿರೆಯ ವ್ಯಕ್ತಿಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಮಂಗಳವಾರ ಮೃತಪಟ್ಟಿದ್ದಾರೆ. ಇದರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಸಂಭವಿಸಿದ ಸಾವುಗಳ ಸಂಖ್ಯೆ 25ಕ್ಕೇರಿದೆ.
ಉಸಿರಾಟದ ತೀವ್ರ ತೊಂದರೆಯ ಕಾರಣದಿಂದ ಮೂಡಬಿದಿರೆಯ 62 ವರ್ಷ ವಯಸ್ಸಿನ ವ್ಯಕ್ತಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿತ್ತು.
ಮಂಗಳವಾರ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.