ADVERTISEMENT

ಮಂಗಳೂರು: ಕೊರೊನಾ ಸೋಂಕಿತ ವ್ಯಕ್ತಿ‌ ಸಾವು

​ಪ್ರಜಾವಾಣಿ ವಾರ್ತೆ
Published 2 ಜುಲೈ 2020, 5:58 IST
Last Updated 2 ಜುಲೈ 2020, 5:58 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ನಿಂದ ಗುರುವಾರ ಮತ್ತೊಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ.

ಬಂಟ್ವಾಳ ತಾಲ್ಲೂಕಿನ ಕಲ್ಕಡ್ಕ ನಿವಾಸಿಯಾಗಿರುವ 49 ವರ್ಷದ ವ್ಯಕ್ತಿ ಮೃತಪಟ್ಟಿದ್ದು, ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ ನಿಂದ ಸಾವನ್ನಪ್ಪಿದವರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ.

ಕಳೆದ 20 ದಿನಗಳಿಂದ ಮನೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಈ ವ್ಯಕ್ತಿಯನ್ನು ಶನಿವಾರ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಿಡ್ನಿ, ಟಿ.ಬಿ.ಹಾಗೂ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಇವರಲ್ಲಿ ಕೋವಿಡ್ ಸೊಂಕು ಪತ್ತೆಯಾಗಿತ್ತು.ಗುರುವಾರ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.

ADVERTISEMENT

ಬುಧವಾರವಷ್ಟೇ ಜಿಲ್ಲೆಯಲ್ಲಿ 72 ವರ್ಷದ ಬೆಂಗ್ರೆ ನಿವಾಸಿ, ಭಟ್ಕಳದ31 ವರ್ಷದ ಯುವಕ ಹಾಗೂ ಉತ್ತರ ಕನ್ನಡ ಮೂಲದ76 ವರ್ಷದ ವೃದ್ಧ ಮೃತಪಟ್ಟಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.